ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ದಕ್ಷಿಣ ಕೋಲ್ಕತ್ತದಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ದಕ್ಷಿಣ ಕೋಲ್ಕತ್ತದಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ವಕ್ತಿಯ ಬಳಿ ಇದ್ದ ವಿವಿಧ ಗುರುತಿನ ಚೀಟಿಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಕೋಲ್ಕತ್ತ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಯು ಡ್ಯಾಗರ್, ಪಿಸ್ತೂಲ್ ಹಾಗು ಮಾದಕ ವಸ್ತುಗಳನ್ನು ಹೊಂದಿದ್ದ. ಆತ ಸಿಎಂ ನಿವಾಸಕ್ಕೆ ನುಗ್ಗಲು ಯತ್ನಿಸಿದ್ದು ಏಕೆ ಎಂಬುದನ್ನು ತಿಳಿಯಲು ತನಿಖೆ ಚುರುಕುಗೊಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಮುಕ್ತಾಯವಾದ ವಿವಿಧ ಪಂಚಾಯಿತಿ ಚುನಾವಣೆಗಳ ಸಂದರ್ಭದಲ್ಲಿ ಗಲಭೆಗಳು ನಡೆದಿದ್ದವು.