ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ನರೇಗಾ) ಅನುದಾನ ಕಡಿತ ಮಾಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕುರಿತ ಸಂಸದೀಯ ಸಮಿತಿಯು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ (ನರೇಗಾ) ಅನುದಾನ ಕಡಿತ ಮಾಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕುರಿತ ಸಂಸದೀಯ ಸಮಿತಿಯು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಅನುದಾನ ಕಡಿತ ಮಾಡಿರುವುದಕ್ಕೆ ಕಾರಣ ನೀಡದಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಇಲಾಖೆಯನ್ನು ಟೀಕಿಸಿದೆ.
ಈ ವರ್ಷದ ಜನವರಿ 25ರೊಳಗೆ ಕೇಂದ್ರ ಸರ್ಕಾರವು ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೀಡುವ ವೇತನದಲ್ಲಿ ₹6,231 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದು ಲೋಕಸಭೆಯಲ್ಲಿ ಗುರುವಾರ ಮಂಡಿಸಿದ ವರದಿಯಲ್ಲಿ ಸಮಿತಿಯು ಹೇಳಿದೆ.
ಈ ಬಾರಿಯ ಬಜೆಟ್‌ನಲ್ಲಿ ನರೇಗಾಕ್ಕೆ ₹60 ಸಾವಿರ ಕೋಟಿ ಅನುದಾನ ಘೋಷಿಸಲಾಗಿದೆ. ಈ ಹಿಂದಿನ ಬಜೆಟ್‌ನಲ್ಲಿ ₹73 ಸಾವಿರ ಕೋಟಿ ಹಂಚಿಕೆ ಮಾಡಲಾಗಿತ್ತು ಮತ್ತು ಬಜೆಟ್‌ನಲ್ಲಿ ಪರಿಷ್ಕೃತ ಅಂದಾಜಿನ ಪ್ರಕಾರ ₹89,400 ಕೋಟಿ ಘೋಷಿಸಲಾಗಿತ್ತು.