HEALTH TIPS

ವಾರಾಣಸಿ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

              ವಾರಾಣಸಿ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯು, ದೇವಾಲಯದ ಮೇಲೆ ನಿರ್ಮಾಣವಾಗಿದೆಯೇ ಎಂಬುದರ ನಿರ್ಣಯಕ್ಕಾಗಿ ವೈಜ್ಞಾನಿಕ ಸಮೀಕ್ಷೆ ಸೋಮವಾರ ಬೆಳಿಗ್ಗೆ ಆರಂಭವಾಗಿತ್ತು.

              ಆದರೆ, ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್, ಈ ಸಮೀಕ್ಷೆಗೆ ತಡೆಯಾಜ್ಞೆ ನೀಡಿದೆ. ಬುಧವಾರದವರೆಗೆ ಸಮೀಕ್ಷೆ ನಡೆಸುವುದನ್ನು ನಿಲ್ಲಿಸಬೇಕು ಎಂದು ಆದೇಶಿಸಿದೆ.

ಭಾರತೀಯ ಪುರಾತತ್ವ ಇಲಾಖೆಯ 40 ಅಧಿಕಾರಿಗಳು (ASI- Archaeological Survey of India) ಬೆಳಿಗ್ಗೆ 7 ರಿಂದ ಸಮೀಕ್ಷೆ ಆರಂಭಿಸಿದ್ದರು.

                 ಮುಸ್ಲಿಂ ಅರ್ಜಿದಾರರ ಪರವಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತಡೆಯಾಜ್ಞೆ ನೀಡಿದೆ. ಸಮೀಕ್ಷೆ ಬೇಕೆ? ಬೇಡವೆ? ಎಂಬ ಮುಂದುವರೆದ ವಾದವನ್ನು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ ಎಂದು ಸುಪ್ರೀಂ ಹೇಳಿದೆ.

               ನಾವು ಸುಪ್ರೀಂ ಕೋರ್ಟ್ ತಡೆಯಾಜ್ಞೆಯನ್ನು ಪಾಲಿಸುತ್ತೇವೆ. ಇಂದು ಸಂಜೆ 5 ಗಂಟೆವರೆಗೆ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು ಎಂದು ವಾರಾಣಸಿ ಜಿಲ್ಲಾಧಿಕಾರಿ ಹೇಳಿದ್ದಾರೆ.

                ಮಸೀದಿಯ ವಿವರವಾದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ವಾರಾಣಸಿಯ ಜಿಲ್ಲಾ ನ್ಯಾಯಾಲಯ ಶುಕ್ರವಾರ‌ ಪುರಾತತ್ವ ಇಲಾಖೆಗೆ ಸೂಚನೆ ನೀಡಿತ್ತು. ಅಗತ್ಯ ಎದುರಾದರೆ ಉತ್ಖನನ ನಡೆಸುವಂತೆಯೂ ತಿಳಿಸಿತ್ತು.

                ಸಮೀಕ್ಷೆ ಹಿನ್ನೆಲೆಯಲ್ಲಿ ಮಸೀದಿಗೆ ಹಾಗೂ ಮಸೀದಿ ಸುತ್ತಮುತ್ತ ಭಾರಿ ಭದ್ರತೆಯನ್ನು ಒದಗಿಸಲಾಗಿತ್ತು.

              ವಿಡಿಯೊ, ಫೊಟೊಗಳ ಸಹಿತ ವಿವರವಾದ ವರದಿಯನ್ನು ಆ‌ಗಸ್ಟ್‌ 4ರ ಒಳಗಾಗಿ ಸಲ್ಲಿಸುವಂತೆ ನ್ಯಾಯಾಲಯವು ಪುರಾತತ್ವ ಇಲಾಖೆಗೆ ತಿಳಿಸಿತ್ತು.

                  ಮಸೀದಿಯ 'ವಝುಖಾನಾ'ದಲ್ಲಿ 'ಶಿವಲಿಂಗ'ದಂಥ ರಚನೆ ಇದೆ ಎಂದು ಹೇಳಲಾಗಿದ್ದು, ಆ ಸ್ಥಳದ ಸಂರಕ್ಷಣೆಗೆ ಸುಪ್ರೀಂಕೋರ್ಟ್ ಈಗಾಗಲೇ ‌ಆದೇಶಿಸಿದೆ. ಹೀಗಾಗಿ ನಿರ್ದಿಷ್ಟ ಜಾಗದಲ್ಲಿ ಸಮೀಕ್ಷೆ ನಡೆಯುತ್ತಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries