ರಾಯ್‌ಪುರ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ತೆರಿಗೆ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳಾ ಐಎಎಸ್ ಅಧಿಕಾರಿ ರಾನು ಸಾಹು ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬಂಧಿಸಿದೆ.
ರಾಯ್‌ಪುರ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ತೆರಿಗೆ ಹಗರಣಕ್ಕೆ ಸಂಬಂಧಿಸಿದಂತೆ ಮಹಿಳಾ ಐಎಎಸ್ ಅಧಿಕಾರಿ ರಾನು ಸಾಹು ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬಂಧಿಸಿದೆ.
ಕಲ್ಲಿದ್ದಲು ತೆರಿಗೆ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾನು ಸಾಹು ಅವರನ್ನು ಬಂಧಿಸಲಾಗಿದೆ.
ಸಾಹು ಅವರು ಛತ್ತೀಸ್‌ಗಢ ರಾಜ್ಯ ಕೃಷಿ ಇಲಾಖೆ ನಿರ್ದೇಶಕಿಯಾಗಿ ಸದ್ಯ ಕೆಲಸ ಮಾಡುತ್ತಿದ್ದರು.
ಇ.ಡಿ ಅಧಿಕಾರಿಗಳು ನಿನ್ನೆ ಸಾಹು ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಅವರ ಬಳಿ ₹5.52 ಕೋಟಿ ಸ್ಥಿರಾಸ್ತಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾಹು ಅವರು ರಾಯಗಢ ಮತ್ತು ಕೊರ್ಬಾ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ.