ನವದೆಹಲಿ: ಜಾರಿ ನಿರ್ದೇಶನಾಲಯದ(ಇ.ಡಿ) ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಮೂರನೇ ಬಾರಿಗೆ ವಿಸ್ತರಣೆ ಮಾಡಿರುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಜೊತೆಗೆ, ವಿಸ್ತರಣೆಗೊಂಡಿದ್ದ ಅವರ ಅಧಿಕಾರಾವಧಿಯನ್ನು ಜುಲೈ 31ಕ್ಕೆ ಮೊಟಕುಗೊಳಿಸಿದೆ.

ಹಣಕಾಸು ಕಾರ್ಯಪಡೆ(ಎಫ್‌ಎಟಿಎಫ್) ನಡೆಸಿದ ಕೂಲಂಕಷ ಪರಿಶೀಲನೆ ಆಧಾರದ ಮೇಲೆ ಮಿಶ್ರಾ ಅಧಿಕಾರಾವಧಿಯನ್ನು ಜುಲೈ 31ಕ್ಕೆ ಮೊಟಕುಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಹೇಳಿದೆ.
1984ರ ಐಆರ್‌ಎಸ್ ಬ್ಯಾಚ್‌ನ ಅಧಿಕಾರಿ ಮಿಶ್ರಾ, ಸರ್ಕಾರದ ಅಧಿಕಾರಾವಧಿ ವಿಸ್ತರಣೆ ಅಧಿಸೂಚನೆ ಅನ್ವಯ ನವೆಂಬರ್ 18, 2023ರವರೆಗೆ ಅಧಿಕಾರದಲ್ಲಿ ಮುಂದುವರಿಯಬೇಕಿತ್ತು.
ಇ.ಡಿ ನಿರ್ದೇಶಕರ ಅಧಿಕಾರಾವಧಿಯನ್ನು ಗರಿಷ್ಠ ಐದು ವರ್ಷಗಳವರೆಗೆ ಮಾತ್ರ ವಿಸ್ತರಿಸಲು ಅವಕಾಶವಿದೆ ಎಂದು ಕೇಂದ್ರ ಜಾಗೃತ ಆಯೋಗ ಕಾಯ್ದೆ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆಯ ತಿದ್ದುಪಡಿಗಳನ್ನು ಪೀಠವು ಉಲ್ಲೇಖಿಸಿತು.
ಇ.ಡಿ ನಿರ್ದೆಶಕರ ಅಧಿಕಾರಾವಧಿ ವಿಸ್ತರಣೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಮೇಲಿನ ತೀರ್ಪನ್ನು ಮೇ 8ರಂದು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು.
ಡಿಸೆಂಬರ್ 12 ರಂದು ಈ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಇತರರಿಂದ ನ್ಯಾಯಾಲಯ ಪ್ರತಿಕ್ರಿಯೆ ಕೇಳಿತ್ತು.
ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಜಯಾ ಠಾಕೂರ್ ಮತ್ತು ಟಿಎಂಸಿಯ ಮಹುವಾ ಮೊಯಿತ್ರಾ ಸಾಕೇತ್ ಗೋಖಲೆ ಅವರು ಸಲ್ಲಿಸಿದ ಅರ್ಜಿಗಳ ಮೇಲೆ ಪೀಠವು ತೀರ್ಪು ನೀಡಿದೆ.