HEALTH TIPS

ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ಪ್ರಶಸ್ತಿ; ಶರದ್ ಪವಾರ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಅಜಿತ್ ಪವಾರ್

             ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರು ಆಗಸ್ಟ್ 1 ರಂದು ಪುಣೆಯಲ್ಲಿ ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನ ಪ್ರಶಸ್ತಿ ಸಮಾರಂಭದಲ್ಲಿ ತಮ್ಮ ಚಿಕ್ಕಪ್ಪನ ಜೊತೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.

                ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಲಾಗುತ್ತಿದ್ದು, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

                 ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ವರ್ಷದ ಪ್ರತಿಷ್ಠಿತ ಲೋಕಮಾನ್ಯ ತಿಲಕ್ ಪ್ರಶಸ್ತಿ ನೀಡಲಾಗುವುದು ಎಂದು ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ  ಡಾ.ದೀಪಕ್ ತಿಲಕ್ ಅವರು ಹೇಳಿದ್ದಾರೆ.

                    ಪುಣೆಯ ತಿಲಕ್ ಮಹಾರಾಷ್ಟ್ರ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲೋಕಮಾನ್ಯ ತಿಲಕರ ಪುಣ್ಯತಿಥಿಯಾದ ಆಗಸ್ಟ್ 1ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

                   "ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸಮಾಜಕ್ಕೆ ಅಸಾಧಾರಣ ಕೊಡುಗೆಗಳನ್ನು ನೀಡಿದವರನ್ನು ಗುರುತಿಸಿ ನೀಡಲಾಗುತ್ತದೆ. ಈ ಪ್ರಶಸ್ತಿಯು ಸ್ಮರಣಿಕೆ ಮತ್ತು ಪ್ರಮಾಣಪತ್ರದ ಜೊತೆಗೆ, 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ.

                      ಈ ಕಾರ್ಯಕ್ರಮಕ್ಕೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಇತರ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಲೋಕಮಾನ್ಯ ತಿಲಕ್ ಸ್ಮಾರಕ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.


    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries