ಮಂಜೇಶ್ವರ: ಮಂಜೇಶ್ವರ ಅಬಕಾರಿ ಚೆಕ್‍ಪೋಸ್ಟ್ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 285 ಲೀಟರ್ ಕರ್ನಾಟಕ-ಗೋವಾ ನಿರ್ಮಿತ ವಿದೇಶಿ ಮದ್ಯ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಕೂಡ್ಲು ಬೆದ್ರಡ್ಕ ನಿವಾಸಿ ಸುರೇಶ್ (41)ಎಂಬಾತನನ್ನು ಬಂಧಿಸಿದ್ದಾರೆ. ಮದ್ಯ ಸಾಗಾಟಕ್ಕೆ ಬಳಸಿದ್ದ ಬಲೆನೋ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಮಂಜೇಶ್ವರಂ ಅಬಕಾರಿ ನಿರೀಕ್ಷಕ ಆರ್. ಟಿನೋಶ್ ಅವರ ನೇತೃತ್ವದ ಅಬಕಾರಿ ತಂಡ ವಾಮಂಜೂರು ಚೆಕ್ ಪೆÇೀಸ್ಟ್ ಬಳಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಕಾರಿನ ಟ್ರಂಕ್ ಹಾಗೂ ಹಿಂಬದಿಯ ಸೀಟಿನಲ್ಲಿ ಮದ್ಯ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. 155 ಲೀಟರ್ ಕರ್ನಾಟಕ, 130 ಲೀಟರ್ ಗೋವಾ ನಿರ್ಮಿತ ವಿದೇಶಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.