ಕಾಸರಗೋಡು: ಮಾಜಿ ಸೈನಿಕರ ಮಕ್ಕಳಿಗೆ ವೈದ್ಯಕೀಯ ಯಾ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ತರಬೇತಿ ಪಡೆಯುವ ನಿಟ್ಟಿನಲ್ಲಿ ಧನಸಹಾಯ ಒದಗಿಸಲಾಗುತ್ತದೆ. 2023-24 ರಲ್ಲಿ ಆರು ತಿಂಗಳಿಗಿಂತ ಕಡಿಮೆಯಿಲ್ಲದ ವೈದ್ಯಕೀಯ ಯಾ ಎಂಜಿನಿಯರಿಂಗ್ ಪ್ರವೇಶ ಪರೀಕ್ಷಾ ತರಬೇತಿಯಲ್ಲಿ ಭಾಗವಹಿಸಿರುವ ಮಾಜಿ ಸೈನಿಕರ ಮಕ್ಕಳು ಸೈನಿಕ ಕಲ್ಯಾಣ ಇಲಾಖೆಯ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಸೈನಿಕ ಕಲ್ಯಾಣ ಕಚೇರಿಯಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಪೂರಕ ದಾಖಲೆಗಳೊಂದಿಗೆ ಆಗಸ್ಟ್ 26 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994-256860)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.