ಅಹಮದಾಬಾದ್:ಗುಜರಾತ್, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಭಾನುವಾರ ಧಾರಾಕಾರ ಮಳೆಯಾಗಿದೆ. ದೆಹಲಿಯಲ್ಲಿ ಯಮುನಾ ನದಿ ಅಪಾಯ ಮಟ್ಟವನ್ನು ಮೀರಿದೆ. ಜುಲೈ 24ರಂದು ಗುಜರಾತ್‌ನ ವಿವಿಧೆಡೆ ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ 'ಆರೆಂಜ್' ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಗುಜರಾತ್‌ನ ಜುನಾಗಢದಲ್ಲಿ ಭಾನುವಾರ ನೆರೆ ನೀರು ಕಡಿಮೆಯಾಗಿದ್ದು, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುನಾಗಢದ ಪ್ರವಾಹಪೀಡಿತ ಪ್ರದೇಶದಿಂದ ಮೂರು ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದೂ ಹೇಳಿದ್ದಾರೆ.
'ಮಳೆ ಕಡಿಮೆಯಾದ ಕಾರಣ ನಗರದಲ್ಲಿ ವಿದ್ಯುತ್ ಸಂಪರ್ಕ ಪುನರ್‌ಸ್ಥಾಪಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆ ನಡೆಸಿ ಸಂಕಷ್ಟಕ್ಕೆ ಸಿಲುಕಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ' ಎಂದು ಜುನಾಗಢದ ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಭಾನುವಾರ ಬೆಳಿಗ್ಗೆ 6ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜುನಾಗಢದಲ್ಲಿ 241ಮಿ.ಮೀ. ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಅಧಿಕಾರಿಗಳು ಹೇಳಿದ್ದಾರೆ.
ರಾಜ್ಯದಾದ್ಯಂತ ಶನಿವಾರ ಬಾರಿ ಮಳೆ ಸುರಿದ ಪರಿಣಾಮ ಎರಡು ರಾಷ್ಟ್ರೀಯ ಹೆದ್ದಾರಿ, 10 ರಾಜ್ಯ ಹೆದ್ದಾರಿ ಮತ್ತು ಗ್ರಾಮೀಣ ಪ್ರದೇಶದ 300 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು.