ತಿರುವನಂತಪುರ: ವಿಜಿಲೆನ್ಸ್ ತನಿಖೆಗೆ ಕಾಲಮಿತಿ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೂರು ತಿಂಗಳೊಳಗೆ ಪ್ರಾಥಮಿಕ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿವಿಧ ಇಲಾಖೆಗಳಲ್ಲಿ ನಡೆಸಿದ ಮಿಂಚಿನ ತಪಾಸಣೆಯ ವರದಿಯನ್ನು ಒಂದು ತಿಂಗಳೊಳಗೆ ನಿರ್ದೇಶಕರಿಗೆ ಸಲ್ಲಿಸಬೇಕು. ಯಾವುದೇ ಇಲಾಖೆ ಅಥವಾ ಅಧಿಕಾರಿಯ ಬಗ್ಗೆ ಮಾಹಿತಿ ಬಂದರೆ ರಹಸ್ಯ ತನಿಖೆ ನಡೆಸಲು ಒಂದು ತಿಂಗಳ ಕಾಲಾವಕಾಶವೂ ಇದೆ.
ಸÀಕಾಈರಕ್ಕೆ ಬಂದಿರುವ ದೂರುಗಳಲ್ಲಿ ವಿಜಿಲೆನ್ಸ್ ತನಿಖೆಗೆ ಅನುಮತಿ ನೀಡಿದರೆ ಆರು ತಿಂಗಳೊಳಗೆ ಪೂರ್ಣಗೊಳಿಸಬೇಕು. ಭ್ರಷ್ಟ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಕರಣಗಳಲ್ಲಿ ಆರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು.
ಅಕ್ರಮ ಸಂಪತ್ತು ಗಳಿಕೆ ಹಾಗೂ ಗಂಭೀರ ಸ್ವರೂಪದ ಕೆಲವು ಪ್ರಕರಣಗಳಲ್ಲಿ 12 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಿಜಿಲೆನ್ಸ್ ಚಟುವಟಿಕೆಗಳನ್ನು ಬಲಪಡಿಸಲು ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ, ವಿಜಿಲೆನ್ಸ್ ನಿರ್ದೇಶಕ ಮನೋಜ್ ಅಬ್ರಹಾಂ ಅವರು ಸಮಯ ಮಿತಿಯನ್ನು ನಿಗದಿಪಡಿಸಲು ಶಿಫಾರಸು ಮಾಡಿದರು. ಈ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರ ಆದೇಶ ಹೊರಡಿಸಿದೆ.