ನವದೆಹಲಿ: ಸಹಕಾರ ಸಂಘಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವ ಮೂಲಕ ಅವುಗಳನ್ನು ಬಲಪಡಿಸುವ ಉದ್ದೇಶ ಹೊಂದಿರುವ ಬಹುರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆಯು ಲೋಕಸಭೆಯಲ್ಲಿ ಮಂಗಳವಾರ ಅಂಗೀಕಾರವಾಯಿತು.
ನವದೆಹಲಿ: ಸಹಕಾರ ಸಂಘಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ತರುವ ಮೂಲಕ ಅವುಗಳನ್ನು ಬಲಪಡಿಸುವ ಉದ್ದೇಶ ಹೊಂದಿರುವ ಬಹುರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆಯು ಲೋಕಸಭೆಯಲ್ಲಿ ಮಂಗಳವಾರ ಅಂಗೀಕಾರವಾಯಿತು.
ಸಹಕಾರ ಸಂಘಗಳಿಗೆ ಕ್ರಮಬದ್ಧವಾಗಿ ಚುನಾವಣೆ ನಡೆಸುವ ಪ್ರಸ್ತಾಪವನ್ನೂ ಈ ಕಾಯ್ದೆ ಹೊಂದಿದೆ.
ಮಸೂದೆಯನ್ನು ಸದನದಲ್ಲಿ ಮಂಡಿಸಿದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ, 'ಈ ಮಸೂದೆಯಲ್ಲಿರುವ ಅಂಶಗಳು ಸಹಕಾರ ವಲಯದಲ್ಲಿ ಹೊಸ ಯುಗಕ್ಕೆ ನಾಂದಿ ಹಾಡಲಿವೆ. ಈ ಅವಕಾಶಗಳನ್ನು ಹಿಂದಿನ ಸರ್ಕಾರಗಳು ನಿರ್ಲಕ್ಷಿಸಿದ್ದವು' ಎಂದು ಹೇಳಿದರು.
ಮಸೂದೆ ಅಂಗೀಕಾರಕ್ಕೂ ಮೊದಲು ನಡೆದ ಚರ್ಚೆಯಲ್ಲಿ ಕೇವಲ ಮೂವರು ಸದಸ್ಯರು ಪಾಲ್ಗೊಂಡರು. ಗದ್ದಲದ ನಡುವೆಯೇ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಬಳಿಕ ಸಭಾಧ್ಯಕ್ಷ ಓಂ ಬಿರ್ಲಾ ಅವರು ಸದನವನ್ನು ಬುಧವಾರಕ್ಕೆ ಮುಂದೂಡಿದರು.