ಮಂಜೇಶ್ವರ : ಮಕ್ಕಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.
ಆ ಪ್ರಯುಕ್ತ ಮಾದಕ ವಸ್ತುಗಳ ವಿರುದ್ಧ ಪ್ರತಿಜ್ಞೆಯನ್ನು ಶಿಕ್ಷಕಿ ನಯನ ಎಂ ಬೋಧಿಸಿದರು. ಬಳಿಕ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿದರು. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮಕ್ಕಳಿಂದ ಕಿರು ನಾಟಕ ಪ್ರದರ್ಶಿಸಿದರು. ಶಾಲಾ ಅಧ್ಯಾಪಕ ವೃಂದ ಜೊತೆಗಿದ್ದು ಸಹಕರಿಸಿದರು.