ಇಂಫಾಲ: ಮಣಿಪುರ ಹಿಂಸಾಚಾರದ ಸಂದರ್ಭ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ತಿಳಿಸಿದ್ದಾರೆ.
ಇಂಫಾಲ: ಮಣಿಪುರ ಹಿಂಸಾಚಾರದ ಸಂದರ್ಭ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ತಿಳಿಸಿದ್ದಾರೆ.
ಪ್ರಸ್ತುತ, ಪ್ರಕರಣ ಕುರಿತಂತೆ ಸಂಪೂರ್ಣ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರಿಗೆ ಗರಿಷ್ಠ ಶಿಕ್ಷೆ ಸಾಧ್ಯತೆಯನ್ನು ಪರಿಗಣಿಸುವುದು ಸೇರಿದಂತೆ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸುತ್ತೇವೆ. ನಮ್ಮ ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಸಿಂಗ್ ಹೇಳಿದ್ದಾರೆ.
ಮೇ 4ರಂದು ಮಣಿಪುರದ ಹಿಂಸಾಚಾರದ ಸಂದರ್ಭ ದುಷ್ಕರ್ಮಿಗಳು ಕುಕಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. 70 ದಿನಗಳ ನಂತರ ಆಘಾತಕಾರಿ ವಿಡಿಯೊ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ವಿಡಿಯೊದಲ್ಲಿ ಬೆತ್ತಲೆಗೊಳಿಸಿ ಮಹಿಳೆಯರನ್ನು ಮೆರವಣಿಗೆ ಮಾಡುವ ಜೊತೆಗೆ ಕೆಲ ಪುರುಷರು ಅವರಿಗೆ ಪದೇ ಪದೇ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.