ಕಾಸರಗೋಡು: ಅಂಗಡಿಮೊಗರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಬಿರುಸಿನ ಮಳೆಗೆ ಮರ ಬುಡಸಹಿತ ಕಳಚಿಬಿದ್ದ ಪರಿಣಾಮ ಸಾವನ್ನಪ್ಪಿದ ವಿದ್ಯಾರ್ಥಿನಿ ಆಯಿಷತ್ ಮಿನ್ಹಾ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಬಿಡುಗಡೆಗೊಳಿಸಲಾದ ಧನ ಸಹಾಯವನ್ನು ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಚೇಂಬರ್‍ನಲ್ಲಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅವರು ವಿದ್ಯಾರ್ಥಿಯ ತಂದೆ ಪಿ.ಎಂ.ಯೂಸುಫ್ ಅವರಿಗೆ ನಾಲ್ಕು ಲಕ್ಷ ರೂ. ಮೊತ್ತದ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭ ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಞಂಬು, ಇ.ಚಂದ್ರಶೇಖರನ್, ಅಪರ ಜಿಲ್ಲಾಧಿಕಾರಿ ಸೂಫಿಯಾನ್ ಅಹ್ಮದ್, ಸಹಾಯಕ ಜಿಲ್ಲಾಧಿಕಾರಿ ದಿಲೀಪ್ ಕೆ.ಕೈನಿಕರ, ಮಂಜೇಶ್ವರ ತಾಲೂಕು ತಹಸೀಲ್ದಾರ್ ಟಿ.ಸಾಜಿ ಉಪಸ್ಥಿತರಿದ್ದರು.