ತಿರೂರು: ಕಾಮನ್ ಸಿವಿಲ್ ಕೋಡ್ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂ ಸುಳ್ಳು ಪ್ರಚಾರ ನಡೆಸುತ್ತಿವೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ರಾಜ್ಯ ಸಚಿವ ರಾಜ್ ಕುಮಾರ್ ರಂಜನ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಒಂಬತ್ತನೇ ವಾರ್ಷಿಕ ಕಾರ್ಯಕ್ರಮಗಳ ಅಂಗವಾಗಿ ಮಲಪ್ಪುರಂ ಪೆÇನ್ನಾನಿ ಲೋಕಸಭಾ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಸಚಿವರು ತಿರೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಾಮಾನ್ಯ ನಾಗರಿಕ ಸಂಹಿತೆಯ ಕರಡು ಸಹ ಬಿಡುಗಡೆಯಾಗದ ಪರಿಸ್ಥಿತಿಯಲ್ಲಿ ಊಹಾಪೆÇೀಹಗಳನ್ನು ಹಬ್ಬಿಸಿ ಅಲ್ಪಸಂಖ್ಯಾತರಲ್ಲಿ ಆತಂಕ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಮಣಿಪುರದಲ್ಲಿ ಈಗ ನಡೆಯುತ್ತಿರುವುದು ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಮಾಡಿದ್ದನ್ನು ಪ್ರತಿಬಿಂಬಿಸುತ್ತದೆ. ಇಂದಿನ ಗಲಭೆಗೆ ಕಾಂಗ್ರೆಸ್ ಕಾರಣ. ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಶೀಘ್ರದಲ್ಲಿಯೇ ಸಮಸ್ಯೆಗಳು ಬಗೆಹರಿಯಲಿವೆ ಎಂದರು.
ಕೇಂದ್ರ ಸರ್ಕಾರ ಕೇರಳದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಮೋದಿ ಸರ್ಕಾರದ ಆಡಳಿತ ತಾರತಮ್ಯ ರಹಿತವಾಗಿದೆ ಎಂದು ಅವರು ಹೇಳಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ರವಿ ತೇಲತ್, ರಾಜ್ಯ ಉಪಾಧ್ಯಕ್ಷ ಅಡ್ವ.ಬಿ. ಗೋಪಾಲಕೃಷ್ಣನ್, ಕಾರ್ಯದರ್ಶಿ ಎ. ನಾಗೇಶ್, ಕೆ.ಕೆ. ಸುರೇಂದ್ರನ್, ಎನ್. ಅನಿಲ್ ಕುಮಾರ್, ರಮಾ ಶಾಜಿ ಭಾಗವಹಿಸಿದ್ದರು.