ನವದೆಹಲಿ: ಮಣಿಪುರದ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಆಗ್ರಹಿಸಿರುವ ಆಮ್ ಆದ್ಮಿ ಪಕ್ಷ, ಇದೇ ವಿಚಾರವಾಗಿ ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ಮಣಿಪುರದ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಆಗ್ರಹಿಸಿರುವ ಆಮ್ ಆದ್ಮಿ ಪಕ್ಷ, ಇದೇ ವಿಚಾರವಾಗಿ ಮಂಗಳವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಣಿಪುರದ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಸಂಸತ್‌ನಲ್ಲಿ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಕಲಾಪಕ್ಕೂ ಮುನ್ನ ಸಂಸತ್ ಭವನ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಮಲ್ಲಿಕಾರ್ಜುನ ಖರ್ಗೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಇಲ್ಲಿಯವರೆಗೆ ಸುಮಾರು 160 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಸಮನ್ವಯತೆ ಸಾಧಿಸುವ ಪ್ರಯತ್ನಗಳು ನಡೆಯುತ್ತಿದ್ದರೂ ಹಿಂಸಾಚಾರ ಹತೋಟಿಗೆ ತರಲು ಸರ್ಕಾರಗಳು ವಿಫಲವಾಗಿದೆ. ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಪ್ರತಿಭಟನೆ ನಡೆಸಿದ ಘಟನೆ ಬೆಳಕಿಗೆ ಬಂದ ನಂತರ ಹಿಂಸಾಚಾರ ಇನ್ನಷ್ಟು ತಾರಕ್ಕೇರಿದೆ.