ಕಾಸರಗೋಡು: ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾಸರಗೋಡು ಜಿಲ್ಲಾ ಕಛೇರಿಯಲ್ಲಿ ಛಾಯಾಗ್ರಾಹಕರ ಪ್ಯಾನಲಿಗೆ ಅರ್ಜಿ ಆಹ್ವಾನಿಸಿದೆ. ಕಾಸರಗೋಡು ಜಿಲ್ಲೆಯ ಕಾಯಂ ನಿವಾಸಿಯಾಗಿದ್ದು, ಪತ್ರಿಕಾ ಸಂಸ್ಥೆಗಳಲ್ಲಿ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದವರಿಗೆ, ಕಾಂಟ್ರಾಕ್ಟ್ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದವರಿಗೂ ಆದ್ಯತೆ ನೀಡಲಾಗುವುದು. ಡಿಜಿಟಲ್ ಎಸ್.ಎಲ್.ಆರ್ ಮಿರರ್‍ಲೆನ್ಸ್ ಕ್ಯಾಮೆರಾಗಳನ್ನು ಬಳಸಿಕೊಂಡು ಹೈ ರೆಸಲ್ಯೂಶನ್ ಚಿತ್ರಗಳನ್ನು ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದಿರಬೇಕು. ವಿವರವಾದ ಬಯೋ ಡಾಟಾ ಮತ್ತು ಸಂಬಂಧಿತ ದಾಖಲೆಗಳ ಪ್ರತಿಗಳನ್ನು ಒಳಗೊಂಡ ಅರ್ಜಿಯನ್ನು ಆಗಸ್ಟ್ 10 ರೊಳಗೆ ಜಿಲ್ಲಾ ಮಾಹಿತಿ ಕಛೇರಿಯಲ್ಲಿ ನೀಡಬೇಕು. ಇಮೇಲ್ ವಿಳಾಸ ಜioಞsgಜ@gmಚಿiಟ.ಛಿom. ಹೆಚ್ಚಿನ ವಿವರಗಳಿಗಾಗಿ ಕಾಸರಗೋಡು ಜಿಲ್ಲಾ ಇನ್ಫರ್ಮೇಷನ್ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ:04994 255145.