ತಿರುವನಂತಪುರಂ: ಮುಂದಿನ ಗಂಟೆಗಳಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಿನ್ನೆ ಸಂಜೆ 5 ಗಂಟೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಮುಂದಿನ ಮೂರು ಗಂಟೆಗಳಲ್ಲಿ ಕೇರಳದ 13 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ನಿನ್ನೆ ಮೂರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿತ್ತು. ಪತ್ತನಂತಿಟ್ಟ, ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು.
ಮುಂದಿನ ಐದು ದಿನಗಳ ಕಾಲ ಮಳೆಯ ಸಂಭವನೀಯತೆಯ ಮುನ್ಸೂಚನೆ
29- 08 - 2023 : ಪತ್ತನಂತಿಟ್ಟ, ಇಡುಕ್ಕಿ, ಮಲಪ್ಪುರಂ
30 - 08 - 2023 : ಅಲಪ್ಪುಳ, ಎರ್ನಾಕುಳಂ
ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ಕೇರಳ-ಕರ್ನಾಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.