ಮುಂಬೈ: ಸರ್ಕಾರಿ ಅನುದಾನಿತ ವಶತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 160ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಮುಂಬೈ: ಸರ್ಕಾರಿ ಅನುದಾನಿತ ವಶತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 160ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಐದರಿಂದ, 15 ವರ್ಷದೊಳಗಿನ ಮಕ್ಕಳು ಅಸ್ವಸ್ಥರಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ರಾಜಾ ದಯಾನಿಧಿ ರಾಜ್ಯ ಸರ್ಕಾರದ ಅನುದಾನಿತ ಆಶ್ರಮ ವಸತಿ ಶಾಲೆಯಲ್ಲಿ ಭಾನುವಾರ ಸಂಜೆ ವಿದ್ಯಾರ್ಥಿಗಳು ಆಹಾರ ಸೇವಿಸಿದ ಬಳಿಕ ತೀವ್ರ ಅಸ್ವಸ್ಥರಾಗಿದ್ದಾರೆ. 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಬಳಲಿದ್ದು, ತಕ್ಷಣವೇ ಅವರನ್ನು ಜತ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಸ್ವಸ್ಥ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಿದಾಗ ಕಲುಷಿತ ಆಹಾರ ಸೇವಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಜಾ ದಯಾನಿಧಿ ತಿಳಿಸಿದ್ದಾರೆ.