ನವದೆಹಲಿ: 1984ರ ಸಿಖ್ ವಿರೋಧಿ ಹಿಂಸಾಚಾರದ ವೇಳೆ ಪುಲ್ ಬಂಗಷ್‌ನಲ್ಲಿ ನಡೆದ ಕೊಲೆ ಪ್ರಕರಣಗಳ ಸಂಬಂಧ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಶೇಷ ನ್ಯಾಯಾದೀಶ ವಿಕಾಸ್ ಧುಳ್ ಅವರು ಟೈಟ್ಲರ್‌ಗೆ ಜಾಮೀನು ನೀಡುವ ಮುನ್ನ, ಸಾಕ್ಷ್ಯ ನಾಶದ ಪ್ರಯತ್ನ ನಡೆಸುವಂತಿಲ್ಲ ಹಾಗೂ ಅನುಮತಿ ಇಲ್ಲದೆ ದೇಶ ತೊರೆಯಬಾರದು ಎಂಬ ಷರತ್ತುಗಳನ್ನು ವಿಧಿಸಿದ್ದಾರೆ.