ಗುರುಗ್ರಾಮ: ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 200 ಜನರನ್ನು ಬಂಧಿಸಲಾಗಿದ್ದು, 102 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಗುರುಗ್ರಾಮ: ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ 200 ಜನರನ್ನು ಬಂಧಿಸಲಾಗಿದ್ದು, 102 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಈವರೆಗೂ 102 ಎಫ್‌ಐಆರ್ ದಾಖಲು ಮಾಡಲಾಗಿದೆ.
ಬಂಧನಕ್ಕೆ ಒಳಾಗದವರ ವಿಚಾರಣೆ ನಡೆಯುತ್ತಿದ್ದು, ಘರ್ಷಣೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಶುಕ್ರವಾರದ ನಮಾಜ್‌ಗೆ ನೂಹ್, ಗುರುಗ್ರಾಮ, ಫರಿದಾಬಾದ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು ಎಂದು ಅವರು ಹೇಳಿದರು.
ನೂಹ್ ಪಟ್ಟಣದಲ್ಲಿ ಜುಲೈ 31 (ಸೋಮವಾರ) ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿಯನ್ನೂ ಹಚ್ಚಿದ್ದರು.
ಕೋಮು ಗಲಭೆಯಿಂದ ಹರಿಯಾಣದಲ್ಲಿ ಗೃಹ ರಕ್ಷಕ ದಳದ ಇಬ್ಬರು ಮತ್ತು ನಾಲ್ವರು ನಾಗರಿಕರು ಸೇರಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ಹರಿಯಾಣದ ನೂಹ್ ಪಟ್ಟಣದಲ್ಲಿ ಇಂದು (ಶುಕ್ರವಾರ) ಕೂಡ ನಿಷೇಧಾಜ್ಞೆ ಮುಂದುವರಿದಿದ್ದು, ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.