ನವದೆಹಲಿ: ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆ ಯಶಸ್ಸಿಗೆ ಸಹಕರಿಸುವಂತೆ ದೆಹಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ನವದೆಹಲಿ: ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆ ಯಶಸ್ಸಿಗೆ ಸಹಕರಿಸುವಂತೆ ದೆಹಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ದಕ್ಷಿಣ ಆಫ್ರಿಕಾ ಹಾಗೂ ಗ್ರೀಕ್ ದೇಶಗಳ ಪ್ರವಾಸದ ಬಳಿಕ ಬೆಂಗಳೂರಿಗೆ ಹಿಂತಿರುಗಿದ ಪ್ರಧಾನಿ ಮೋದಿ, ಚಂದ್ರಯಾನ-3 ಯಶಸ್ಸಿಗಾಗಿ ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಿದರು.
ಜಿ-20 ಶೃಂಗಸಭೆಗೆ ವಿಶ್ವ ನಾಯಕರು ಆಗಮಿಸುತ್ತಿದ್ದಾರೆ. ಅವರೆಲ್ಲರೂ ನಮ್ಮ ಅತಿಥಿಗಳಾಗಿದ್ದು, ಸಂಚಾರ ನಿಯಮ ಬದಲಾಗಲಿದೆ. ಅನೇಕ ಪ್ರದೇಶಗಳಿಗೆ ಹೋಗುವುದಕ್ಕೆ ನಿರ್ಬಂಧ ಹೇರಬೇಕಾಗುತ್ತದೆ. ಹಾಗಾಗಿ ಸಾಕಷ್ಟು ಅನಾನುಕೂಲತೆ ಉಂಟಾಗಲಿದ್ದು, ಅದಕ್ಕಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
ಇಡೀ ದೇಶವೇ ಜಿ20 ಶೃಂಗಸಭೆಗೆ ಅತಿಥ್ಯ ವಹಿಸುತ್ತಿದೆ. ಆದರೆ ಅತಿಥಿಗಳು ದೆಹಲಿಗೆ ಆಗಮಿಸುತ್ತಾರೆ. ಜಿ20 ಶೃಂಗಸಭೆ ಯಶಸ್ವಿಗೊಳಿಸಲು ದೆಹಲಿ ನಿವಾಸಿಗಳ ಮೇಲೆ ವಿಶೇಷ ಜವಾಬ್ದಾರಿ ಇದೆ. ರಾಷ್ಟ್ರದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಜಿ-20 ಶೃಂಗಸಭೆ ಸೆಪ್ಟೆಂಬರ್ 9 ಹಾಗೂ 10ರಂದು ನಡೆಯಲಿದೆ. 30ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ 14 ಮುಖ್ಯಸ್ಥರು ಭಾಗವಹಿಸಲಿದ್ದಾರೆ.