ತಿರುವನಂತಪುರಂ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಕಣಿಮಂಗಲಂ ಎಂಬ ಪ್ರದೇಶದಲ್ಲಿ ನಿನ್ನೆ ನಡೆದಿದೆ.
ತಿರುವನಂತಪುರಂ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಕಣಿಮಂಗಲಂ ಎಂಬ ಪ್ರದೇಶದಲ್ಲಿ ನಿನ್ನೆ ನಡೆದಿದೆ.
ನಿನ್ನೆ ಬೆಳಗ್ಗೆ 8:30ರ ಸುಮಾರಿಗೆ ಘಟನೆ ಸಂಭವಿಸಿದ್ದು, ತ್ರಿಶೂರ್-ತ್ರಿಪ್ರಯಾರ್ ನಡುವೆ ಬಸ್ ಸಂಚರಿಸುತ್ತಿತ್ತು ಎಂದು ವರದಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅಪಘಾತ ಹೇಗೆ ಸಂಭವಿಸಿತ್ತು ಎಂದು ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಘಟನೆ ನಡೆದ ವೇಳೆ ಬಸ್ಸಿನಲ್ಲಿ ಒಟ್ಟು 50 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳಿಗೆ ಖಾಸಗಿ ಹಾಗೂ ತ್ರಿಶೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.