HEALTH TIPS

ಅಮರನಾಥ ಯಾತ್ರೆ: 300 ಅಡಿ ಆಳಕ್ಕೆ ಬಿದ್ದು ಯಾತ್ರಾರ್ಥಿ ಸಾವು

                 ಶ್ರೀನಗರ: ಅಮರನಾಥನ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ 50 ವರ್ಷದ ಯಾತ್ರಾರ್ಥಿಯೊಬ್ಬರು ಶುಕ್ರವಾರ ತಡರಾತ್ರಿ ಕಾಲು ಜಾರಿ 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

                 ಜಮ್ಮು ಮತ್ತು ಕಾಶ್ಮೀರದ ಕಾಳಿಮಾತೆಯ ಬಳಿ ಘಟನೆ ಸಂಭವಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

                  ಮೃತರನ್ನು ವಿಜಯ್ ಕುಮಾರ್ ಶಾ ಎಂದು ಗುರುತಿಸಲಾಗಿದ್ದು, ಬಿಹಾರದ ರೋಹ್ತಾಸ್ ಜಿಲ್ಲೆಯ ತುಂಬಾ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.


                  'ಅಮರನಾಥನ ದರ್ಶನ ಪಡೆದು ವಿಜಯ್ ಕುಮಾರ್ ಅವರು ಮಮತಾ ಕುಮಾರಿ ಜೊತೆಗೂಡಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಕಾಳಿಮಾತೆ ಗುಹೆಯ ಬಳಿ ಜಾರಿ 300 ಅಡಿ ಆಳಕ್ಕೆ ಬಿದ್ದಿದ್ದರು. ಕೂಡಲೇ ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ. ಆದರೆ, ವಿಜಯ್ ಕುಮಾರ್ ಕೊನೆಯುಸಿರೆಳೆದಿದ್ದಾರೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

            ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಮಳೆ ಕಡಿಮೆಯಾದ ಕಾರಣ ಶುಕ್ರವಾರದಿಂದ (ಆ.18ರಿಂದ) ಯಾತ್ರೆಯನ್ನು ಮತ್ತೆ ಆರಂಭಿಸಲಾಯಿತು.

               ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries