ನವದೆಹಲಿ: ಕೇರಳದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 371 ಅಪಾಯಕಾರಿ ವಲಯಗಳನ್ನು (ಬ್ಲ್ಯಾಕ್ ಸ್ಪಾಟ್) ಗುರುತಿಸಿದೆ ಎಂದು ಕೇಂದ್ರ ಮೇಲ್ಮೈ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಅಂತಹ ಸ್ಥಳಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಾದೇಶಿಕ ಅಧಿಕಾರಿಗಳಿಗೆ 50 ಕೋಟಿ ಮತ್ತು ಯೋಜನಾ ನಿರ್ದೇಶಕರಿಗೆ 25 ಲಕ್ಷದವರೆಗೆ ಮಂಜೂರು ಮಾಡಲಾಗಿದೆ. 371 ಬ್ಯಾಕ್ ಸ್ಪಾಟ್‍ಗಳಲ್ಲಿ 57 ಅಪಘಾತಗಳನ್ನು ತಪ್ಪಿಸಲು ಅಗತ್ಯವಾದ ನವೀಕರಣ ಕ್ರಮಗಳನ್ನು ಪೂರ್ಣಗೊಳಿಸಿದೆ ಮತ್ತು 157 ಸ್ಥಳಗಳಲ್ಲಿ ಕೆಲಸ ಪ್ರಗತಿಯಲ್ಲಿದೆ ಎಂದು ನಿತಿನ್ ಗಡ್ಕರಿ ಹೇಳಿದರು.