ಬೆಂಗಳೂರು: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ನಗರದ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಿಸಲಾಗಿದೆ.
3ಡಿ ಅಂಚೆ ಕಚೇರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ನೋಡಲು ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ. ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ. ಇದು ಸ್ವಾವಲಂಬಿ ಭಾರತದ ಆತ್ಮವನ್ನು ಒಳಗೊಂಡಿದೆ. ಅಂಚೆ ಇಲಾಖೆಯನ್ನು ಪೂರ್ಣಗೊಳಿಸುವಲ್ಲಿ ಶ್ರಮಿಸಿದವರಿಗೆ ಅಭಿನಂದನೆಗಳು' ಎಂದು ಆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ತಂತ್ರಜ್ಞಾನದಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಕನಿಷ್ಠ 6 ತಿಂಗಳು ಬೇಕಾಗುತ್ತದೆ. ಅದನ್ನು 3ಡಿ ತಂತ್ರಜ್ಞಾನದಲ್ಲಿ ಕೇವಲ 45 ದಿನಗಳಲ್ಲಿ ನಿರ್ಮಿಸಲಾಗಿದೆ. ಚೆನ್ನೈ ಐಐಟಿ ಮಾರ್ಗದರ್ಶನದಲ್ಲಿ ಲಾರ್ಸೆನ್ ಮತ್ತು ಟುಬ್ರೋ ಲಿಮಿಟೆಡ್ (ಎಲ್ ಆಯಂಡ್ ಟಿ) ಸಂಸ್ಥೆ ನಿರ್ಮಿಸಿದೆ. ಈ ಕಟ್ಟಡ 1021 ಚದರ ಅಡಿ ಒಟ್ಟು ವಿಸ್ತೀರ್ಣವನ್ನು ಹೊಂದಿದೆ