ಭೋಪಾಲ್: ಮಧ್ಯಪ್ರದೇಶದ ಅಗರ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿ 40 ಮಂದಿ ಅಸ್ವಸ್ಥರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಭೋಪಾಲ್: ಮಧ್ಯಪ್ರದೇಶದ ಅಗರ್ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪ್ರಸಾದ ಸೇವಿಸಿ 40 ಮಂದಿ ಅಸ್ವಸ್ಥರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಶ್ರಾವಣ ಮಾಸದ ಪ್ರಯುಕ್ತ ಇಲ್ಲಿನ ದೇವಸ್ಥಾನವೊಂದರಲ್ಲಿ ದೇವರ ದರ್ಶನ ಪಡೆಯಲು ಅಪಾರ ಭಕ್ತಾದಿಗಳು ಬಂದಿದ್ದರು. 200ಕ್ಕೂ ಹೆಚ್ಚು ಮಂದಿ ದೇವರ ಮೆರವಣಿಗೆಯಲ್ಲಿ ಪಾಲ್ಗೊಂಡ ಬಳಿಕ ಪ್ರಸಾದ ಸೇವಿಸಿದ್ದಾರೆ.
ಭಾಂಗ್ (ಗಾಂಜಾ) ಮಿಶ್ರಿತ ಪ್ರಸಾದ ಸೇವಿಸಿದ ನಂತರ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಅಸ್ವಸ್ಥರಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡವವರು ಈಗ ಚೇತರಿಸಿಕೊಳ್ಳುತ್ತಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಸ್ಥಳೀಯ ಆರೋಗ್ಯ ಇಲಾಖೆಯ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.