ಕೋಲ್ಕತ್ತ: ಪಶ್ಚಿಮ ಬಂಗಾಳದ ನಾರ್ತ್ 24 ಪರಗಣಾಸ್ ಜಿಲ್ಲೆಯ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದು, ಅವಶೇಷಗಳ ಅಡಿಯಿಂದ 5 ಮೃತದೇಹಗಳನ್ನು ಹೊರತೆಗೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ದತ್ತಪುಕುರ್ ನಲ್ಲಿನ ಪೊಲೀಸ್ ಮೂಲಗಳ ಪ್ರಕಾರ ಸಾವಿನ ಸಂಖ್ಯೆ ಹಾಗೂ ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ.
ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಬರಸತ್ ನಲ್ಲಿರುವ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ.