ಶಿಮ್ಲಾ: ಇಲ್ಲಿನ ಸಮ್ಮರ್ ಹಿಲ್ ಪ್ರದೇಶದಲ್ಲಿ ಕುಸಿದು ಬಿದ್ದ ಶಿವ ದೇವಾಲಯದ ಅವಶೇಷಗಳಡಿ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಸತ್ತವರ ಸಂಖ್ಯೆ 72ಕ್ಕೆ ಏರಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಶಿಮ್ಲಾ: ಇಲ್ಲಿನ ಸಮ್ಮರ್ ಹಿಲ್ ಪ್ರದೇಶದಲ್ಲಿ ಕುಸಿದು ಬಿದ್ದ ಶಿವ ದೇವಾಲಯದ ಅವಶೇಷಗಳಡಿ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿದ್ದು, ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಸತ್ತವರ ಸಂಖ್ಯೆ 72ಕ್ಕೆ ಏರಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮೃತರನ್ನು ಹಿಮಾಚಲ ಪ್ರದೇಶ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥ ಪ್ರೊ.
'ರಾಜ್ಯದ ರಾಜಧಾನಿ ಶಿಮ್ಲಾದ ಸಮ್ಮರ್‌ಹಿಲ್, ಫಾಗಲಿ ಮತ್ತು ಕೃಷ್ಣಾನಗರದಲ್ಲಿ ಭೂಕುಸಿತದ ಮೂರು ಘಟನೆಗಳಲ್ಲಿ ಸಾವಿನ ಸಂಖ್ಯೆ 21ಕ್ಕೆ ತಲುಪಿದೆ' ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ತಿಳಿಸಿದ್ದಾರೆ.
ಸಮ್ಮರ್ ಹಿಲ್ ಮತ್ತು ಕೃಷ್ಣನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಸಮ್ಮರ್ ಹಿಲ್‌ನಲ್ಲಿ 14 ಶವಗಳು, ಫಾಗಲಿಯಲ್ಲಿ ಐದು ಮತ್ತು ಕೃಷ್ಣನಗರದಲ್ಲಿ ಎರಡು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಅವರು ಹೇಳಿದರು.
ಸೋಮವಾರ ಭೂಕುಸಿತ ಸಂಭವಿಸಿದಾಗ ಶಿವ ದೇವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಭಾನುವಾರದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಿಮ್ಲಾ ಸೇರಿ ಹಲವು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ.
ಹಲವು ರಸ್ತೆಗಳು ಅಸ್ತವ್ಯಸ್ತಗೊಂಡಿದ್ದು, ಆಗಾಗ್ಗೆ ಭೂಕುಸಿತಗಳು ಸಂಭವಿಸುತ್ತಿರುವುದರಿಂದ ಶಿಮ್ಲಾ ನಗರ ವಿಧಾನಸಭಾ ವಿಭಾಗದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಗುರುವಾರ ಆದೇಶ ಹೊರಡಿಸಿದ್ದಾರೆ.
ಜುಲೈ ಮತ್ತು ಈ ವಾರದಲ್ಲಿ ಸುರಿದ ಭಾರಿ ಮಳೆಯಿಂದ ರಾಜ್ಯದಲ್ಲಿ ಸುಮಾರು ₹10 ಸಾವಿರ ಕೋಟಿ ನಷ್ಟ ಆಗಿರುವ ಅಂದಾಜು ಇದೆ. ಹಾನಿಗೊಳಗಾದ ಮೂಲಸೌಕರ್ಯ ಮರುನಿರ್ಮಾಣಕ್ಕೆ ಒಂದು ವರ್ಷ ಬೇಕಾಗಲಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ.