ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ವ್ಯವಸ್ಥಾಪಕ ಕೆ.ಎನ್ ಕೃಷ್ಣ ಭಟ್ ಧ್ವಜಾರೋಹಣಗೈದರು. ಶಾಲಾ ಮಕ್ಕಳಿಂದ ಸ್ವಾತಂತ್ರ್ಯ ಹೋರಾಟಗಾರರ ವೇಷ ಪ್ರದರ್ಶನ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷÀ ವಿಷ್ಣು ಪ್ರಕಾಶ್ ಪೆರ್ವ ವಹಿಸಿದ್ದರು.
ಶಾಲಾ ವವಸ್ಥಾಪಕ ಕೆ.ಎನ್ ಕೃಷ್ಣ ಭಟ್ ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಾಯ ಭಟ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಶಾರದಾ, ಕಿಳಿಂಗಾರು ಎಜುಕೇಶನ್ ಕಮಿಟಿಯ ಸದಸ್ಯ ಶಿವಪ್ರಸಾದ್, ಸ್ಥಳೀಯ ಯುವಕೇಸರಿ ಕಿಳಿಂಗಾರು ಕ್ಲಬ್ ನ ಕಾರ್ಯದರ್ಶಿ ಪ್ರಕಾಶ್ ಶುಭಾಶಂಸನೆಗೈದರು. ಮಕ್ಕಳಿಂದ ದೇಶಭಕ್ತಿಯನ್ನು ಸಾರುವ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅಧ್ಯಾಪಿಕೆಯರಾದ ಮಧುಮತಿ, ಅನುರಾಧ, ಸುನೀತ, ತೇಜಸ್ವಿ, ಅಂಗನವಾಡಿ ಅಧ್ಯಾಪಿಕೆ ಪದ್ಮಿನಿ, ಕಾರ್ಯಕರ್ತೆ ಶಾಲಿನಿ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀವಿದ್ಯಾ ಎ ಸ್ವಾಗತಿಸಿ, ಅಧ್ಯಾಪಕ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು. ಸಹನಾ ಕಾರ್ಯಕ್ರಮ ನಿರೂಪಿಸಿದರು.