ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಸಲುವಾಗಿ ಬಿಜೆಪಿಯು ದೆಹಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.
ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಸಲುವಾಗಿ ಬಿಜೆಪಿಯು ದೆಹಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.
'ಚುನಾವಣೆ ಹಿನ್ನೆಲೆಯಲ್ಲಿ ಎದುರಾಗಬಹುದಾದ ಯಾವುದೇ ಸವಾಲನ್ನು ತಡೆಯುವ ಉದ್ದೇಶದಿಂದ ಲೋಕಸಭಾ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ' ಎಂದು ಉಸ್ತುವಾರಿಯಾಗಿ ನೇಮಕಗೊಂಡಿರುವ ಮುಖಂಡರೊಬ್ಬರು ತಿಳಿಸಿದ್ದಾರೆ.
'ಚುನಾವಣೆಗೂ ಕನಿಷ್ಠ ಆರು ತಿಂಗಳು ಮೊದಲೇ ಪಕ್ಷದ ಎಲ್ಲ ಹಂತಗಳಲ್ಲಿ ಸಂಘಟನಾತ್ಮಕ ಹಾಗೂ ರಾಜಕೀಯ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವುದನ್ನು ಖಾತ್ರಿಪಡಿಸುವ ಜವಾಬ್ದಾರಿಯನ್ನು ಉಸ್ತುವಾರಿಗಳಿಗೆ ವಹಿಸಲಾಗಿದೆ' ಎಂದು ಬಿಜೆಪಿಯ ದೆಹಲಿ ಘಟಕದ ಮಾಧ್ಯಮ ವಿಭಾಗದ ಪದಾಧಿಕಾರಿ ಪ್ರವೀಣಶಂಕರ್ ಕಪೂರ್ ಹೇಳಿದ್ದಾರೆ.
2014 ಹಾಗೂ 2019ರಲ್ಲಿ ದೆಹಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆದ್ದಿತ್ತು.