ಕಾಸರಗೋಡು: ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಹಿರಿಯ ವಿದ್ಯಾರ್ಥಿಗಳ ತಂಡವೊಂದು ಕಿರಿಯ ವಿದ್ಯಾರ್ಥಿಗೆ ರ್ಯಾಗಿಂಗ್ ಮೂಲಕ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಕಿವಿ ತಮಟೆಗೆ ಹಾನಿಯುಂಟಾಗಿದ್ದು, ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಪೊಲೀಸರು ಆಸ್ಪತ್ರೆಗೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಆರೋಪ ಎದುರಿಸುತ್ತಿರುವ ನಾಲ್ವರು ವಇದ್ಯಾರ್ಥಿಗಳು ಬುಧವಾರ ತರಗತಿಗೆ ಆಗಮಿಸಿರಲಿಲ್ಲ.