HEALTH TIPS

ಮಣಿಪುರ ಹಿಂಸಾಚಾರ: ಸಿಬಿಐ ತನಿಖೆಗೆ ಇನ್ನೂ ಒಂಬತ್ತು ಪ್ರಕರಣಗಳು

             ವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಇನ್ನೂ ಒಂಬತ್ತು ಪ್ರಕರಣಗಳ ತನಿಖೆ ನಡೆಸಲು ಸಿಬಿಐ ಸಿದ್ಧತೆ ನಡೆಸಿದೆ. ಈ ಮೂಲಕ, ಮಣಿಪುರಕ್ಕೆ ಸಂಬಂಧಿಸಿದಂತೆ ಸಿಬಿಐ ಕೈಗೆತ್ತಿಕೊಂಡಿರುವ ಪ್ರಕರಣಗಳ ಸಂಖ್ಯೆ 17ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                'ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಅದರಲ್ಲಿ ಎರಡು ಪ್ರಕರಣಗಳು ಮಹಿಳೆಯರ ಮೇಲೆ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿವೆ. ಇನ್ನೂ ಒಂಬತ್ತು ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ಪ್ರಕ್ರಿಯೆ ನಡೆದಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

             ಈ 17 ಪ್ರಕರಣಗಳಿಗೆ ಮಾತ್ರ ಸಿಬಿಐ ತನಿಖೆಯನ್ನು ಸೀಮಿತಗೊಳಿಸುವುದಿಲ್ಲ. ಮಹಿಳೆಯರ ವಿರುದ್ಧ ಹಿಂಸಾಚಾರ ಅಥವಾ ಲೈಂಗಿಕ ದೌರ್ಜನ್ಯದಂಥ ಪ್ರಕರಣಗಳಿಗೆ ಸಂಬಂಧಿಸಿದ ಇತರ ಪ್ರಕರಣಗಳನ್ನೂ ಸಿಬಿಐಗೆ ವಹಿಸಲಾಗುವುದು. ರಾಜ್ಯದ ಚುರಚಾಂದ್‌ಪುರ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನೂ ಸಿಬಿಐ ಕೈಗೆತ್ತಿಕೊಳ್ಳುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                  ಸಿಬಿಐ ಕೈಗೆತ್ತಿಕೊಂಡಿರುವ ಈ ಪ್ರಕರಣಗಳಲ್ಲಿ ಹಲವು ಪ್ರಕರಣಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ತಡೆ) ಕಾಯ್ದೆ- 1989ರ ಅಡಿ ತನಿಖೆಗೆ ಒಳಪಡಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

             ಮಣಿಪುರವು ಜನಾಂಗೀಯ ನೆಲೆಗಟ್ಟಿನಲ್ಲಿ ಇಬ್ಭಾಗವಾಗಿರುವ ಕಾರಣ, ತನಿಖೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸಂಗ್ರಹಿಸಲಾಗಿರುವ ಸಾಕ್ಷ್ಯಗಳು ಮತ್ತು ಇತರ ಮಾದರಿಗಳ ಪರೀಕ್ಷೆಯನ್ನು ಇಲ್ಲಿ ನಡೆಸುತ್ತಿಲ್ಲ. ಬದಲಾಗಿ, ದೆಹಲಿಯ ಕೇಂದ್ರೀಯ ವಿಧಿವಿಜ್ಞಾನಗಳ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಮಹಿಳೆಯರ ಮೇಲೆ ನಡೆದಿರುವ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗಾಗಿ ಮಹಿಳಾ ಅಧಿಕಾರಿಗಳನ್ನು ರಾಜ್ಯಕ್ಕೆ ಕಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries