ಕೊಚ್ಚಿ: ವಾಹನ ಮಾಲೀಕತ್ವವನ್ನು ಪರಿಶೀಲಿಸಲು ಮತ್ತು ವಂಚನೆ ತಡೆಯಲು ಆಧಾರ್ ಕಡ್ಡಾಯವಾಗಿ ಪರಿಶೀಲಿಸುವ ಕುರಿತು ವಿವರಣೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ಸೂಚಿಸಿದೆ.
ವರದಿ ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸಾರಿಗೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಪತಿ ನಕಲಿ ಸಹಿ ಹಾಕಿದ ವಾಹನದ ನೋಂದಣಿಯನ್ನು ಬದಲಾಯಿಸಿರುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಮಹಿಳೆ ಸಲ್ಲಿಸಿದ್ದ ಅರ್ಜಿಯಲ್ಲಿ ನ್ಯಾಯಾಲಯ ವಿವರಣೆ ಕೇಳಿದೆ.
1989ರ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ವಾಹನಗಳ ಮಾಲೀಕತ್ವ ವರ್ಗಾವಣೆಗೆ ಅಗತ್ಯವಾದ ನಮೂನೆ 29 ಮತ್ತು 30ರಲ್ಲಿ ಪತಿ ತನ್ನ ಸಹಿಯನ್ನು ನಕಲಿ ಮಾಡಿ ಮಾಲೀಕತ್ವವನ್ನು ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ನೋಂದಣಿ ಪ್ರಮಾಣಪತ್ರಕ್ಕೆ ಸಂಬಂಧಿಸಿದ ಯಾವುದೇ ಬದಲಾವಣೆ/ತಿದ್ದುಪಡಿಗಳಿಗೆ ಆಧಾರ್ ಕಡ್ಡಾಯಗೊಳಿಸುವುದರಿಂದ ಈ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಮಹಿಳೆ ತನ್ನ ಅರ್ಜಿಯಲ್ಲಿ ಸೂಚಿಸಿದ್ದಾರೆ. ಇದನ್ನು ಆಧರಿಸಿ ನ್ಯಾಯಮೂರ್ತಿ ಮುರಳಿ ಪುರುμÉೂೀತ್ತಮನ್ ಅವರು ಕೇಂದ್ರ ಮತ್ತು ರಾಜ್ಯ ಸಾರಿಗೆ ಆಯುಕ್ತರು ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಅಭಿಪ್ರಾಯ ಕೇಳಿದರು. ನ್ಯಾಯಾಲಯಕ್ಕೆ ಹಾಜರಾಗುವಂತೆ ಅರ್ಜಿದಾರರ ಪತಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.