HEALTH TIPS

ಮೇಕ್ ಇನ್ ಇಂಡಿಯಾಗೆ ಒತ್ತು: ಲ್ಯಾಪ್‌ಟಾಪ್‌, ಟ್ಯಾಬ್ಲೆಟ್, ಕಂಪ್ಯೂಟರ್ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

                 ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್, ಕಂಪ್ಯೂಟರ್ ಆಮದಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ ಎಂದು ಹೇಳಲಾಗಿದೆ.

                 ರಾಯಿಟರ್ಸ್ ಸುದ್ದಿಸಂಸ್ಥೆ ಈ ಕುರಿತು ವರದಿ ಮಾಡಿದ್ದು, ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ ಹಾಗೂ ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ಕೇಂದ್ರ ಸರ್ಕಾರ ಗುರುವಾರ ನಿರ್ಬಂಧ ಹೇರಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ವ್ಯವಹಾರಗಳ ಮಹಾನಿರ್ದೇಶಕರ ಪ್ರಕಟಣೆ ತಿಳಿಸಿದೆ ಎಂದು ವರದಿ ಮಾಡಿದೆ.

                  ಸ್ಥಳೀಯ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಗುರುವಾರ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಹೇಳಿಕೊಂಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದುಗಳನ್ನು ನಿರ್ಬಂಧಿಸಿದೆ. ನಿರ್ಬಂಧಿತ ಆಮದುಗಳಿಗೆ ಮಾನ್ಯ ಪರವಾನಗಿಯ ವಿರುದ್ಧ ಅವುಗಳ ಆಮದನ್ನು ಅನುಮತಿಸಲಾಗುವುದು. ಸಕಾರಣವಿರುವ ಪರವಾನಗಿ ಇದ್ದರೆ ಮಾತ್ರ ‘ಎಚ್‌ಎಸ್‌ಎನ್‌ 8741‘ ಅಡಿಯಲ್ಲಿ ಬರುವ ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಆಲ್‌ ಇನ್ ಒನ್ ಪರ್ಸನಲ್ ಕಂಪ್ಯೂಟರ್‌, ಅಲ್ಟ್ರಾ ಸ್ಮಾಲ್ ಕಂಪ್ಯೂಟರ್‌ಗಳ ಆಮದು ಮಾಡಿಕೊಳ್ಳಲು ಮಾತ್ರ ಅನುಮತಿ ಇದೆ ಎಂದು ಹೇಳಿದೆ.

                     ‘ಸಂಶೋಧನೆ ಮತ್ತು ಅಭಿವೃದ್ಧಿಗೆ ಅಗತ್ಯವಿದ್ದಲ್ಲಿ ಇಂಥ 20 ವಸ್ತುಗಳನ್ನು ಮಾತ್ರ ಆಮದು ಮಾಡಿಕೊಳ್ಳಲು ಅನುಮತಿ ಇದೆ. ಆದರೆ ಈ ಕಾರಣ ನೀಡಿ ಆಮದು ಮಾಡಿಕೊಂಡ ನಿರ್ಬಂಧಿತ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಅದೇ ಉದ್ದೇಶಕ್ಕೆ ಬಳಸಬೇಕು. ಅವುಗಳನ್ನು ಮಾರಾಟ ಮಾಡುವಂತಿಲ್ಲ. ತಮ್ಮ ಉದ್ದೇಶ ಪೂರ್ಣಗೊಂಡ ನಂತರ ಅವುಗಳನ್ನು ನಾಶಪಡಿಸಬೇಕು, ಇಲ್ಲವೇ ಮರು ರಫ್ತು ಮಾಡಬೇಕು’ ಎಂದು ಷರತ್ತು ವಿಧಿಸಲಾಗಿದೆ.

                     ಈ ಕುರಿತು ಪ್ರಕಟಣೆ ನೀಡಿರುವ ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಾಲಯ, ‘ಬ್ಯಾಗೇಜ್‌ ಕಾನೂನು ಅಡಿಯಲ್ಲಿ ಈ ರೀತಿಯ ಕಂಪ್ಯೂಟರ್‌ ವಸ್ತುಗಳ ಆಮದಿಗೆ ಯಾವುದೇ ನಿರ್ಬಂಧವಿಲ್ಲ. ಇವುಗಳಲ್ಲಿ ಯಾವುದೇ ಬದಲಾವಣೆ ಇದ್ದರೂ ಕಾಲಕಾಲಕ್ಕೆ ಹೊರಡಿಸಲಾಗುವ ಪ್ರಕಟಣೆ ಮೂಲಕ ತಿಳಿಸಲಾಗುವುದು’ ಎಂದು ಸ್ಪಷ್ಟಪಡಿಸಲಾಗಿದೆ.

                       ಎಲೆಕ್ಟ್ರಾನಿಕ್ಸ್ ಉದ್ಯಮ ಸಂಸ್ಥೆಯ ತಯಾರಕರ ಮಾಹಿತಿ ತಂತ್ರಜ್ಞಾನದ ಸಂಘದ ಮಾಜಿ ಮಹಾನಿರ್ದೇಶಕ ಅಲಿ ಅಖ್ತರ್ ಜಾಫ್ರಿ ಅವರು ಈ ಬಗ್ಗೆ ಮಾತನಾಡಿದ್ದು, "ತಯಾರಿಕೆಯನ್ನು ಭಾರತಕ್ಕೆ ತಳ್ಳುವುದು ಅಂದರೆ ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಭಾರತದಲ್ಲೇ ಲ್ಯಾಪ್ ಟಾಪ್, ಟ್ಯಾಬ್ಲೆಟ್ ಮತ್ತು ಪರ್ಸನಲ್ ಕಂಪ್ಯೂಟರ್ ಗಳನ್ನು ದೇಶದಲ್ಲಿಯೇ ತಯಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ದೇಶೀಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಈ ಕ್ರಮ ಸ್ಪೂರ್ತಿಯಾಗಿದೆ' ಎಂದು ಹೇಳಿದರು.

             ಏಪ್ರಿಲ್-ಜೂನ್‌ನಲ್ಲಿ, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ಸ್ ಆಮದುಗಳು 19.7 ಬಿಲಿಯನ್ ಡಾಲರ್ ಆಗಿತ್ತು, ಇದು ವರ್ಷದಿಂದ ವರ್ಷಕ್ಕೆ 6.25% ರಷ್ಟು ಹೆಚ್ಚಾಗಿದೆ. Dell, Acer, Samsung, LG, Panasonic, Apple Inc, Lenovo ಮತ್ತು HP Inc ಭಾರತದ ಮಾರುಕಟ್ಟೆಯಲ್ಲಿ ಲ್ಯಾಪ್‌ಟಾಪ್‌ಗಳನ್ನು ಮಾರಾಟ ಮಾಡುವ ಕೆಲವು ಪ್ರಮುಖ ಕಂಪನಿಗಳಾಗಿದ್ದು, ಗಣನೀಯ ಭಾಗವನ್ನು ಚೀನಾದಂತಹ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries