ಮುಂಬೈ: ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ' ತನ್ನ ಮಹತ್ವದ ಸಭೆಯನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಆಯೋಜಿಸಿರುವ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವೂ ಅದೇ ಸಮಯದಲ್ಲಿ ಸಭೆಯನ್ನು ನಿಗದಿಪಡಿಸಿದೆ.
ಮುಂಬೈ: ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ' ತನ್ನ ಮಹತ್ವದ ಸಭೆಯನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಆಯೋಜಿಸಿರುವ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವೂ ಅದೇ ಸಮಯದಲ್ಲಿ ಸಭೆಯನ್ನು ನಿಗದಿಪಡಿಸಿದೆ.
ಮಹಾರಾಷ್ಟ್ರದಲ್ಲಿ 10 ರಾಜಕೀಯ ಪಕ್ಷಗಳನ್ನು ಒಳಗೊಂಡಿರುವ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ 'ಮಹಾಯುತಿ' ಎಂದು ಹೆಸರಿಡಲಾಗಿದೆ.
ಸೆಪ್ಟೆಂಬರ್ 1ರಂದು ಪ್ರಾದೇಶಿಕವಾರು ಸಭೆ ನಡೆಯಲಿದೆ. ಅದರಂತೆ ಮುಂಬೈ- ಕೊಂಕಣ, ವಿದರ್ಭ, ಮರಾಠವಾಡ, ಪೂರ್ವ ಮಹಾರಾಷ್ಟ್ರ ಮತ್ತು ಉತ್ತರ ಮಹಾರಾಷ್ಟ್ರ ಪ್ರದೇಶಗಳಲ್ಲಿ ಸಭೆ ನಡೆಯಲಿದೆ.
2024ರಲ್ಲಿ ಲೋಕಸಭೆ ಚುನಾವಣೆ ಜೊತೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯೂ ನಡೆಯಲಿದೆ.