HEALTH TIPS

ಅವಿಶ್ವಾಸ ಚರ್ಚೆ: ಲೋಕಸಭೆ ಸದಸ್ಯರಿಗೆ ವಿಪ್ ಜಾರಿ ಮಾಡಿದ ಬಿಜೆಪಿ

Top Post Ad

Click to join Samarasasudhi Official Whatsapp Group

Qries

              ವದೆಹೆಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಎಲ್ಲಾ ಲೋಕಸಭೆ ಸದಸ್ಯರಿಗೆ ಸದನದಲ್ಲಿ ಹಾಜರಿರುವಂತೆ ವಿಪ್ ಅನ್ನು ಜಾರಿಗೊಳಿಸಿದೆ.


             ಲೋಕಸಭೆಯ ಸಂಸದರಿಗೆ ಆಗಸ್ಟ್ 7ರಿಂದ ಆಗಸ್ಟ್ 11ರ ವರೆಗೆ ಸದನದಲ್ಲಿ ಹಾಜರಾಗಲು ಮತ್ತು ಸರ್ಕಾರದ ನಿಲುವು ಮತ್ತು ಮಸೂದೆಗಳನ್ನು ಬೆಂಬಲಿಸಲು ಮೂರು ಸಾಲಿನ ವಿಪ್ ಅನ್ನು ಜಾರಿಗೊಳಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

            ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಆಗಸ್ಟ್‌ 8ರಿಂದ 10ರ ವರೆಗೆ ಲೋಕಸಭೆಯಲ್ಲಿ ಚರ್ಚೆ ನಡೆಯಲಿದೆ. ಚರ್ಚೆಯ ಕೊನೆಯ ದಿನ ಆಗಸ್ಟ್‌ 10ರಂದು ಪ್ರಧಾನಿ ಮೋದಿ ಉತ್ತರ ನೀಡುವ ಸಾಧ್ಯತೆ ಇದೆ.

ಮಂಗಳವಾರ ನಡೆದ ಲೋಕಸಭೆಯ ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಆದರೆ, ತಾವು ಮಂಡಿಸಿದ ಅವಿಶ್ವಾಸ ನಿರ್ಣಯ ಕುರಿತು ಆದ್ಯತೆ ಮೇಲೆ ಚರ್ಚೆಯನ್ನು ಕೈಗೆತ್ತಿಕೊಳ್ಳದಿರುವುದನ್ನು ಪ್ರತಿಭಟಿಸಿ 'ಇಂಡಿಯಾ' ಮೈತ್ರಿಕೂಟದ ಅಂಗಪಕ್ಷಗಳು ಸಮಿತಿ ಸಭೆಯಿಂದ ಹೊರ ನಡೆದವು.

               ಸಮಿತಿ ಸಭೆಯಲ್ಲಿ ಮಾತನಾಡಿದ 'ಇಂಡಿಯಾ'ದ ಅಂಗಪಕ್ಷಗಳಾದ ಕಾಂಗ್ರೆಸ್, ಡಿಎಂಕೆ, ಎಡಪಕ್ಷಗಳು ಮತ್ತು ಟಿಎಂಸಿ ಹಾಗೂ ಬಿಆರ್‌ಎಸ್‌ ನಾಯಕರು, ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯನ್ನು ಬಿಟ್ಟು ಸರ್ಕಾರವು ಈ ವಾರ ತನ್ನ ಶಾಸಕಾಂಗದ ಕಾರ್ಯಸೂಚಿಯನ್ನೇ ಪ್ರಸ್ತಾಪಿಸುತ್ತಿದೆ ಎಂದು ಟೀಕಿಸಿದ್ದರು.

              'ಆಗಸ್ಟ್‌ 8ರಂದು ಅವಿಶ್ವಾಸ ನಿರ್ಣಯ ಕುರಿತು ಚರ್ಚೆ ಆರಂಭಿಸುವ ತೀರ್ಮಾನಕ್ಕೆ ನಾವು ಒಪ್ಪಿಗೆ ನೀಡಬೇಕು ಎಂಬುದು ಸರ್ಕಾರದ ನಿಲುವಾಗಿತ್ತು. ಇದನ್ನು ಪ್ರತಿಭಟಿಸಿ ಕಲಾಪ ಸಲಹಾ ಸಮಿತಿ ಸಭೆಯಿಂದ ಹೊರನಡೆದೆವು' ಎಂದು ಡಿಎಂಕೆ ನಾಯಕ ಟಿ.ಆರ್‌.ಬಾಲು ಹೇಳಿದರು.

ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯನ್ನು ತಕ್ಷಣವೇ ಕೈಗೆತ್ತಿಕೊಳ್ಳಬೇಕು ಎಂದು ಪ್ರತಿಪಾದಿಸುತ್ತಿರುವ ಪ್ರತಿಪಕ್ಷಗಳು, ಈ ವಿಷಯವಾಗಿ ಈ ಮೊದಲಿನ ನಿದರ್ಶನಗಳನ್ನು ಹಾಗೂ ನಿಯಮಗಳನ್ನು ಉಲ್ಲೇಖಿಸಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries