ಮುಂಬೈ: ಈರುಳ್ಳಿ ರಫ್ತಿಗೆ ಶೇ 40ರಷ್ಟು ತೆರಿಗೆ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶಿವಸೇನಾ (ಯುಟಿಬಿ) ಟೀಕೆ ಮಾಡಿದೆ.
ಮುಂಬೈ: ಈರುಳ್ಳಿ ರಫ್ತಿಗೆ ಶೇ 40ರಷ್ಟು ತೆರಿಗೆ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶಿವಸೇನಾ (ಯುಟಿಬಿ) ಟೀಕೆ ಮಾಡಿದೆ.
'ಮೋದಿ ಸರ್ಕಾರ ಸೂರ್ಯನಿಗೂ ನೌಕೆ ಕಳುಹಿಸಬಹುದು. ಆದರೆ ಅದಕ್ಕಿಂತ ಮೊದಲು ದೇಶದ ಈರುಳ್ಳಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕಯ.
'ದೇಶದ ಜನ ಸೂರ್ಯಯಾನ, ಚಂದ್ರಯಾನ ಹಾಗೂ ಶುಕ್ರಯಾನ ಮುಂತಾದ ವಿಷಯಗಳಲ್ಲಿ ತಲ್ಲೀನರಾಗಿದ್ದಾರೆ. ಸೂರ್ಯಯಾನ ಎಲ್ಲವೂ ಸರಿ, ಆದರೆ ರಾಜ್ಯದಲ್ಲಿ ಈರುಳ್ಳಿ ಸಮಸ್ಯೆಯನ್ನು ಸ್ಥಿರಗೊಳಿಸುವುದು ಮುಖ್ಯ' ಎಂದು ಸಂಪಾದಕೀಯದಲ್ಲಿ ಬರೆದುಕೊಂಡಿದೆ.
ಮಹಾರಾಷ್ಟ್ರದ ಅಹಮದನಗರ, ನಾಸಿಕ್ ಹಾಗೂ ಪುಣೆ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯಲಾಗುತ್ತದೆ. ಈರುಳ್ಳಿ ರಫ್ತಿಗೆ ಶೇ 40ರಷ್ಟು ತೆರಿಗೆ ವಿಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಲ್ಲಿನ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.