ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಉಗ್ರರ ಒಳನುಸುಳುವಿಕೆಯ ಯತ್ನವನ್ನು ವಿಫಲಗೊಳಿಸಿರುವ ಭಾರತೀಯ ಸೇನೆಯು ಭಾನುವಾರ ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಉಗ್ರರ ಒಳನುಸುಳುವಿಕೆಯ ಯತ್ನವನ್ನು ವಿಫಲಗೊಳಿಸಿರುವ ಭಾರತೀಯ ಸೇನೆಯು ಭಾನುವಾರ ಒಬ್ಬ ಉಗ್ರನನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಪ್ವಾರದ ತಂಗಧರ್ ಸೆಕ್ಟರ್‌ನ ದಖೇನ್- ಅಮ್ರೊಹಿ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆಯ ಬಗ್ಗೆ ಮಾಹಿತಿ ತಿಳಿದುಬಂದ ಮೇರೆಗೆ ಸೇನೆ ಹಾಗೂ ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದು ಪೊಲೀಸ್ ವಕ್ತಾರ ಹೇಳಿದ್ದಾರೆ.
'ಶೋಧ ಕಾರ್ಯಾಚರಣೆ ವೇಳೆ ಉಗ್ರರ ಚಲನವಲನಗಳು ಕಂಡುಬಂದಿದ್ದವು. ಈ ವೇಳೆ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಯಿತು. ದಟ್ಟ ಪೊದೆಗಳು ಮತ್ತು ಗುಡ್ಡಗಾಡಿನ ಪ್ರದೇಶದಲ್ಲಿ ಇಬ್ಬರಿಂದ ಮೂವರು ಉಗ್ರರು ಪಾಕಿಸ್ತಾನದ ಗಡಿರೇಖೆಯ ಕಡೆಗೆ ಪರಾರಿಯಾದರು. ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಸ್ಥಳದಲ್ಲಿ ಮದ್ದುಗುಂಡುಗಳು, ಶಸ್ತ್ರಾಸ್ತಗಳನ್ನು ವಶಪಡಿಸಿಕೊಳ್ಳಲಾಗಿದೆ' ಎಂದೂ ಅವರು ಟ್ವೀಟ್ ಮಾಡಿದ್ದಾರೆ.