HEALTH TIPS

ರಾಹುಲ್ ಗಾಂಧಿ ಮಾನನಷ್ಟ ಪ್ರಕರಣದ ಕಾಲಗಣನೆ.. ಏನೇನಾಗಿತ್ತು?

 * ಏಪ್ರಿಲ್ 13, 2019: ಕರ್ನಾಟಕದ ಕೋಲಾರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಅವರು, 'ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ... ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮ ಹೊಂದಿರುವುದು ಏಕೆ?' ಎಂದು ಪ್ರಶ್ನಿಸಿದ್ದರು.

* ಏಪ್ರಿಲ್ 15, 2019: ರಾಹುಲ್ ಹೇಳಿಕೆಗೆ ಸೂರತ್‌ನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದರು.

* ಜುಲೈ 7, 2019: ರಾಹುಲ್ ಗಾಂಧಿ ಮೊದಲ ಬಾರಿಗೆ ಸೂರತ್ ಮೆಟ್ರೋಪಾಲಿಟನ್ ನ್ಯಾಯಾಲಯಕ್ಕೆ ಹಾಜರಾದರು.

* ಮಾರ್ಚ್ 23, 2023: ರಾಹುಲ್ ಗಾಂಧಿ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿ ಸೂರತ್ ಮೆಟ್ರೋಪಾಲಿಟನ್ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು.

* ಮಾರ್ಚ್ 24, 2023: ಎರಡು ವರ್ಷಗಳ ಜೈಲು ಶಿಕ್ಷೆಯ ಪರಿಣಾಮ ರಾಹುಲ್ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡರು.

* ಏಪ್ರಿಲ್ 2, 2023: ಮೆಟ್ರೋಪಾಲಿಟನ್ ನ್ಯಾಯಾಲಯದ ಆದೇಶವನ್ನು ರಾಹುಲ್, ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಿದರು. ಇದರ ವಿಚಾರಣೆ ಇನ್ನೂ ಬಾಕಿ ಇದೆ.

* ಏಪ್ರಿಲ್ 20, 2023: ಸೂರತ್ ಸೆಷನ್ಸ್ ನ್ಯಾಯಾಲಯ ರಾಹುಲ್‌ಗೆ ಜಾಮೀನು ನೀಡಿತು, ಆದರೆ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತು.

* ಏಪ್ರಿಲ್ 25, 2023: ಕೆಳ ನ್ಯಾಯಾಲಯದ ಆದೇಶದ ವಿರುದ್ಧ ರಾಹುಲ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದರು.

* ಜುಲೈ 7, 2023: ಶಿಕ್ಷೆಗೆ ತಡೆ ಕೋರಿ ರಾಹುಲ್ ಸಲ್ಲಿಸಿದ್ದ ಮೇಲ್ಮವನಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿತು.

* ಜುಲೈ 15, 2023: ಗುಜರಾತ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ರಾಹುಲ್, ಸುಪ್ರೀಂ ಕೋರ್ಟ್‌ ಮೊರೆ ಹೋದರು. ಒಂದು ವೇಳೆ ತೀರ್ಪಿಗೆ ತಡೆ ನೀಡದಿದ್ದರೆ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆಯುಂಟಾಗುತ್ತದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು.

* ಜುಲೈ 21, 2023: ರಾಹುಲ್ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪೂರ್ಣೇಶ್ ಮೋದಿ ಮತ್ತು ಗುಜರಾತ್‌ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

* ಆಗಸ್ಟ್ 4, 2023: ರಾಹುಲ್ ಗಾಂಧಿ ಅವರಿಗೆ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿತು. ಇದು ಅವರ ಲೋಕಸಭಾ ಸದಸ್ಯತ್ವದ ಮರು ಸ್ಥಾಪನೆಗೆ ದಾರಿ ಮಾಡಿಕೊಟ್ಟಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries