ಮಂಜೇಶ್ವರ: ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ ದಿನವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಮಜಿಬೈಲ್ ಗಣ್ಯರ ಸಮ್ಮುಖದಲ್ಲಿ ನೂತನ ದ್ವಜ ಸ್ತಂಭದ ಉದ್ಘಾಟನೆಯನ್ನು ನೆರವೇರಿಸಿದರು.
ಮಜಿಬೈಲ್ ವಾರ್ಡ್ ಸದಸ್ಯ ಆಶಾಲತಾ ಬಿ.ಎಂ. ಧ್ವಜಾರೋಹಣ ನಡೆಸಿ ಸ್ವಾತಂತ್ರ್ಯದ ಸಂದೇಶವನ್ನು ಸಾರಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ನಿರ್ವಾಹಕ ಸಮಿತಿ ಅಧ್ಯಕ್ಷ ವಿನಯ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕÀ ಶಿವ ಶೆಟ್ಟಿ, ನಿವೃತ್ತ ಉಪಜಿಲ್ಲಾ ವಿದ್ಯಾಧಿಕಾರಿ ಎಂ.ಜಿ. ನಾರಾಯಣ ರಾವ್, ಮಾತೆಯರ ಸಂಘದ ಅಧ್ಯಕ್ಷೆ ಶೋಭಾ, ಶಾಲಾ ಮುಖ್ಯ ಶಿಕ್ಷಕ ಸುರೇಶ ಬಂಗೇರ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಳೇವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಹರೀಶ್ ನಾಯಕ್, ಬಾಲಕೃಷ್ಣ ಶೆಟ್ಟಿ, ರಾಜೇಶ್ ಮಜಿಬೈಲ್ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕøತಿಕ ಚಟುವಟಿಕೆಗಳು ನಡೆದವು. ಸಂಘ ಸಂಸ್ಥೆಗಳ ಹಾಗೂ ಊರ ಹತ್ತು ಸಮಸ್ಥರಿಂದ ಭೋಜನ ಹಾಗೂ ಸಿಹಿತಿಂಡಿ ವಿತರಿಸಲಾಯಿತು. ಕವಿತಾ ಟೀಚರ್ ವಂದಿಸಿದರು. ಅಧ್ಯಾಪಕ ದೇವಾನಂದ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಶಿಕ್ಷಕಿ ಅಶ್ವಿನಿ ಸಹಕರಿಸಿದರು.