ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು (ಹೋಮ್ ಗಾರ್ಡ್) ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಕೃಷ್ಣಾ ಬಾಗ್ ಕಾಲೋನಿಯಲ್ಲಿ ರಾಜ್‌ಪಾಲ್ ರಜಾವತ್ ಎಂದು ಗುರುತಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಾಕುನಾಯಿಗಳ ವಿಚಾರಕ್ಕೆ ನೆರೆಹೊರೆಯವರ ನಡುವೆ ಜಗಳ ನಡೆದಿದೆ. ಮಾತಿನ ಚಕಮಕಿ ನಡೆಯುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕೋಪಗೊಂಡ ರಜಾವತ್, ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದ ಬಳಿಕ ಮನೆ ಮುಂದೆ ನೆರೆದಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಇಂದೋರ್‌ನ ಹೆಚ್ಚುವರಿ ಡಿಸಿಪಿ ಅಮರೇಂದ್ರ ಸಿಂಗ್ ಹೇಳಿದ್ದಾರೆ.