ನವದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕೈಗೊಂಡಿರುವಂತೆ ಮಥುರಾದ ಷಾಹಿ ಈದ್ಗಾದಲ್ಲಿ ವೈಜ್ಞಾನಿಕ ಸಮೀಕ್ಷೆ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ನವದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕೈಗೊಂಡಿರುವಂತೆ ಮಥುರಾದ ಷಾಹಿ ಈದ್ಗಾದಲ್ಲಿ ವೈಜ್ಞಾನಿಕ ಸಮೀಕ್ಷೆ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
'ಮಥುರಾದ ಷಾಹಿ ಈದ್ಗಾದ ಜಾಗದಲ್ಲಿದ್ದ ಹಿಂದೂ ದೇವಾಲಯಗಳನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ.
ಟ್ರಸ್ಟ್ ಪರ ವಕೀಲರಾದ ಹಿಮಾಂಶು ಶೇಖರ್ ತ್ರಿಪಾಠಿ ಅವರು ಅರ್ಜಿ ಸಲ್ಲಿಸಿದ್ದು, 'ವಿವಾದಿತ ಭೂಮಿಗೆ ಸಂಬಂಧಿಸಿದ ಹಕ್ಕುಗಳ ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸಂಪೂರ್ಣ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು. ಇದರಿಂದ ವಿಶ್ವಾಸಾರ್ಹ ಆಧಾರ ಲಭ್ಯವಾಗುತ್ತದೆ' ಎಂದು ಪ್ರತಿಪಾದಿಸಿದ್ದಾರೆ.
'ವಿವಾದದಲ್ಲಿರುವ ಭೂಮಿಗೆ ಸಂಬಂಧಿಸಿದ ಧಾರ್ಮಿಕ ಹಿನ್ನೆಲೆಯಲ್ಲಿ ಧಾರ್ಮಿಕ ಇತಿಹಾಸ ಮತ್ತು ಜಾಗದ ಮಹತ್ವವನ್ನು ಸಂಪೂರ್ಣವಾಗಿ ಗ್ರಹಿಸಲು, ಸರಿಯಾದ ವೈಜ್ಞಾನಿಕ ಸಮೀಕ್ಷೆಯ ಅಗತ್ಯವಿದೆ. ಹಾಗಾಗಿ, ಜ್ಞಾನವಾಪಿ ಮಸೀದಿ ಸಂಕೀರ್ಣದ ಮಾದರಿಯಂತೆ ಷಾಹಿ ಈದ್ಗಾದಲ್ಲೂ ವೈಜ್ಞಾನಿಕ ಸಮೀಕ್ಷೆ ಕೈಗೊಳ್ಳಲು ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕು' ಎಂದೂ ಅರ್ಜಿಯಲ್ಲಿ ಹೇಳಲಾಗಿದೆ.