HEALTH TIPS

ಮಣಿಪುರ ಗಲಭೆ ವಿಚಾರಣೆಯನ್ನು ಅಸ್ಸಾಂಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌

            ವದೆಹಲಿ : ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೂ ಸೇರಿದಂತೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಅಸ್ಸಾಂಗೆ ವರ್ಗಾಯಿಸಿದೆ. ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಈ ಹಿಂದೆಯೇ ವಹಿಸಲಾಗಿದೆ.

           ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಮನೋಜ್‌ ಮಿಶ್ರಾ ಅವರಿದ್ದ ಪೀಠವು, ಪ್ರಕರಣಗಳ ನಿರ್ವಹಣೆಗೆ ಒಂದು ಅಥವಾ ಅದಕ್ಕಿಂತ ಹೆಚ್ಚು ನ್ಯಾಯಾಲಯಗಳನ್ನು ನಿಯೋಜನೆ ಮಾಡಬೇಕು ಎಂದು ಗುವಾಹಟಿ ಹೈಕೋರ್ಟ್‌ನ ಮುಖ್ಯ
ನ್ಯಾಯಮೂರ್ತಿ ಅವರಿಗೆ ಸೂಚನೆಯನ್ನೂ ನೀಡಿದೆ.

           ಹಿಂಸಾಚಾರದಲ್ಲಿ ಎರಡೂ ಕಡೆ ಯವರೂ ನೊಂದಿದ್ದಾರೆ. ಹೀಗಾಗಿ ಕ್ರಿಮಿನಲ್ ನ್ಯಾಯದ 'ನ್ಯಾಯೋಚಿತ ಪ್ರಕ್ರಿಯೆ'ಯನ್ನು ಖಾತರಿಪಡಿಸುವ ಉದ್ದೇಶದಿಂದ ಈ ಕ್ರಮ ಅನುಸರಿಸಿರುವುದಾಗಿ ಕೋರ್ಟ್‌ ಹೇಳಿದೆ.

             ಮಣಿಪುರದ ಹಿಂಸಾಚಾರ ಪ್ರಕರಣ ಗಳಿಗೆ ಸಂಬಂಧಿಸಿದಂತೆ ಕೋರ್ಟ್‌ ಹಲವು ನಿರ್ದೇಶನಗಳನ್ನು ನೀಡಿದೆ. ಸಂತ್ರಸ್ತರಿಗೆ ಮಣಿಪುರದಿಂದಲೇ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹೇಳಿಕೆ ದಾಖಲಿಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದೆ.

             ವಿಚಾರಣೆಗೆ ಗೊತ್ತುಪಡಿಸಿದ ನ್ಯಾಯಾಲಯಗಳಲ್ಲಿ ಆರೋಪಿಗಳ ಹಾಜರು ಪಡಿಸುವಿಕೆ, ಬಂಧನ ಮತ್ತು ಬಂಧನದ ಅವಧಿ ವಿಸ್ತರಣೆಗೆ ಸಂಬಂಧಿಸಿದ
             ಪ್ರಕ್ರಿಯೆಗಳನ್ನು ಆನ್‌ಲೈನ್‌ ಮೂಲಕ ನಡೆಸಲು ಸಿಬಿಐಗೆ ಅವಕಾಶವನ್ನೂ ನೀಡಿದೆ.

ಗುವಾಹಟಿ ನ್ಯಾಯಾಲಯದಲ್ಲಿ ಆನ್‌ಲೈನ್ ಮೂಲಕ ವಿಚಾರಣೆ ನಡೆಸಲು ಅನುಕೂಲವಾಗುವಂತೆ ಸಮರ್ಪಕವಾದ ಇಂಟರ್ನೆಟ್ ಸೇವೆ ಒದಗಿಸುವಂತೆ ಮಣಿಪುರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries