ನವದೆಹಲಿ: ಜಲಸಂಪನ್ಮೂಲಗಳ ಸಮರ್ಥ ನಿರ್ವಹಣೆಯು ನೀರಿನ ಲಭ್ಯತೆಯ ಜೊತೆಗೆ ಆರ್ಥಿಕ ಬೆಳವಣಿಗೆಯಲ್ಲೂ ಮಹತ್ವದ ಪಾತ್ರವಹಿಸುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ಸೆಂಟ್ರಲ್ ವಾಟರ್ ಎಂಜಿನಿಯರಿಂಗ್ ಸರ್ವಿಸ್‌ನ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರೀಕರಣ ಮತ್ತು ಅಭಿವೃದ್ಧಿಗೆ ಲಭ್ಯವಿರುವ ಸಂಪನ್ಮೂಲಗಳನ್ನು ಅತ್ಯುತ್ತಮವಾಗಿ ಬಳಸಿಕೊಳ್ಳುವ ಅಗತ್ಯ ಇದೆ ಎಂದಿದ್ದಾರೆ.