ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೊ) ಮಹಾತ್ವಾಕಾಂಕ್ಷೆ ಯೋಜನೆಯಾದ ಚಂದ್ರಯಾನ-3 ಯಶಸ್ವಿಯಾಗಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಆಗಿದೆ. ಆ ಮೂಲಕ ಭಾರತ ಹೊಸ ದಾಖಲೆಯೊಂದನ್ನು ಬರೆದಿದೆ.
ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೊ) ಮಹಾತ್ವಾಕಾಂಕ್ಷೆ ಯೋಜನೆಯಾದ ಚಂದ್ರಯಾನ-3 ಯಶಸ್ವಿಯಾಗಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಆಗಿದೆ. ಆ ಮೂಲಕ ಭಾರತ ಹೊಸ ದಾಖಲೆಯೊಂದನ್ನು ಬರೆದಿದೆ.
ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಾಕ್ಷಿಯಾಗಿದ್ದಾರೆ.
'ನಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆದಿದೆ. ಯೋಜನಾ ನಿರ್ದೇಶಕ ವೀರ ಮುತ್ತುವೆಲ್ ಅವರ ಪರಿಶ್ರಮ ದೊಡ್ಡದು. ತಂಡದ ಎಲ್ಲರಿಗೂ ಧನ್ಯವಾದಗಳು' ಎಂದು ಇಸ್ರೊ ಅಧ್ಯಕ್ಷ ಎಸ್. ಸೋಮನಾಥ ಹೇಳಿದರು.
'ಟೈಮ್ ಲೈನ್ ಪ್ರಕಾರವೇ ಎಲ್ಲವೂ ನಡೆದಿದೆ. ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶ ಭಾರತವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು' ಎಂದು ಯೋಜನಾ ನಿರ್ದೇಶಕ ವೀರ ಮುತ್ತವೇಲ್ ಹೇಳಿದರು.
ಫೋನ್ ಮಾಡಿ ಅಭಿನಂದನೆ ತಿಳಿಸಿದ ಮೋದಿ
ಚಂದ್ರಯಾನ-3 ಯಶಸ್ವಿಯಾಗುತ್ತಿದ್ದಂತೆ ದಕ್ಷಿಣ ಆಫ್ರಿಕಾದಿಂದ ಫೋನ್ ಮಾಡಿದ ಪ್ರಧಾನಿ ಮೋದಿ, ಎಸ್. ಸೋಮನಾಥನ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.