ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿ ತಿಳಿಸಿದೆ.
ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಭಯೋತ್ಪಾದಕನ ಹತ್ಯೆ
0
ಆಗಸ್ಟ್ 21, 2023
Tags
ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿ ತಿಳಿಸಿದೆ.
ತಡರಾತ್ರಿ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪುಲ್ವಾಮಾದ ಲಾರೋ-ಪರಿಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ (ಟ್ವಿಟರ್) ನಲ್ಲಿ ತಿಳಿಸಿದ್ದಾರೆ.
ಉಗ್ರರೊಂದಿಗೆ ಗುಂಡಿನ ಚಕಮಕಿ ಸೋಮವಾರವೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.