ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಗುರುಪೀಠ ಪ್ರತಿಷ್ಠೆಯ ವಾರ್ಷಿಕ ದಿನಾಚರಣೆ ಆ. 29 ರಂದು ಮಂಗಳವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಭಕ್ತಾದಿಗಳು ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶ್ರೀ ಗಾಯತ್ರೀ ಮಾತೆಯ ಹಾಗೂ ನಿತ್ಯಾನಂದ ಭಗವಾನರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಶ್ರೀಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.