ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಚತುರ್ಮಾಸ್ಯ ಸಮಾರಂಭದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾಗಿದ್ದ ಯಕ್ಷಗಾನ ಅಷ್ಟಾಹ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದಿವ್ಯ ಉಪಸ್ಥಿತಿ ವಹಿಸಿದ್ದರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಟಿ.ಶ್ಯಾಮ್ ಭಟ್, ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಉಪಸ್ಥಿತರಿದ್ದರು.