ಜೈಪುರ: ಅಳ್ವಾರ್‌ನಲ್ಲಿ 43 ವರ್ಷದ ಮಹಿಳೆಯೊಬ್ಬರು ಕಾಂಗ್ರೆಸ್ ಶಾಸಕ ಬಾಬುಲಾಲ್ ಬೈರ್ವಾ ಅವರ ಸಿಬ್ಬಂದಿಯೊಬ್ಬರು ಎರಡು ವರ್ಷಗಳ ಹಿಂದೆ ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸೋಮವಾರ ಕೇರ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, ಆರೋಪಿ ವೀರೇಂದ್ರ ತನ್ನ ಪತಿಯ ಸ್ನೇಹಿತನಾಗಿದ್ದು, ತನಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಹೇಳಿದ್ದಾರೆ.
ಈ ಬಗ್ಗೆ ಭಾನುವಾರ ವೀರೇಂದ್ರನನ್ನು ಪ್ರಶ್ನಿಸಿದಾಗ, ಆತ ತನ್ನ ಪತಿಗೆ ಥಳಿಸಿದ್ದಾನೆ ಎಂದು ಮಹಿಳೆ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ಕಥುಮಾರ್ ಶಾಸಕ ಬಾಬುಲಾಲ್ ಬೈರ್ವಾ ಅವರ ಆಪ್ತ ಸಹಾಯಕರಾಗಿ ವೀರೇಂದ್ರ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ವೀರೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 376 (2) (ಎನ್) (ಒಂದೇ ಮಹಿಳೆಯ ಮೇಲೆ ಪುನರಾವರ್ತಿತ ಅತ್ಯಾಚಾರ), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಸಿಬ್ಬಂದಿ, ಮಹಿಳೆ ಮತ್ತು ಆಕೆಯ ಪತಿಯ ನಡುವೆ ಗಲಾಟೆ ನಡೆದಿದೆ. ಆದರೆ, ಜಗಳದ ನಂತರ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿ ತಮ್ಮ ಅಲ್ವಾರ್ ನಿವಾಸದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.